ಶನಿವಾರ, ಮೇ 8, 2021
21 °C

ಮಣಿಪಾಲದ ಕೆಎಂಸಿ ಒಪಿಡಿ ತಾತ್ಕಾಲಿಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕೋವಿಡ್‌–19 ಸೋಂಕು ಹರಡುವಿಕೆ ತಡೆಯಲು ಜುಲೈ 21ರಿಂದ 26ರವರೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್‌ ಶೆಟ್ಟಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಆರೋಗ್ಯ ಕಾರ್ಯಕರ್ತರು ಸಹ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ, ಕೆಎಂಸಿ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲು ಹಾಗೂ ಆಸ್ಪತ್ರೆಗೆ ಹೆಚ್ಚುವರಿಯಾಗಿ 200 ಕೋವಿಡ್‌ ಹಾಸಿಗೆಗಳನ್ನು ಹಾಕಲು ನಿರ್ಧರಿಸಲಾಗಿದ್ದು, ತಾತ್ಕಾಲಿಕವಾಗಿ ಹೊರರೋಗಿ ವಿಭಾಗವನ್ನು ಮುಚ್ಚಲಾಗುತ್ತಿದೆ.

ಸದ್ಯ ಒಪಿಡಿ ಸೌಲಭ್ಯ ಇಲ್ಲವಾದರೂ ಸಾರ್ವಜನಿಕರು ವಿಡಿಯೋ ಮೂಲಕ ವೈದ್ಯಕೀಯ ಸಮಾಲೋಚನಾ ಸೌಲಭ್ಯ ಪಡೆಯಬಹುದು. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಈ ಸೌಲಭ್ಯ ಲಭ್ಯವಿದ್ದು, 080–47192235 ಸಂಪರ್ಕಿಸಬಹುದು. ಆಸ್ಪತ್ರೆಯ ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ದಿನದ 24 ಗಂಟೆ ಕಾರ್ಯ ನಿರ್ವಹಿಸಲಿವೆ ಎಂದು ಅಧೀಕ್ಷಕರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು