ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಸಿಗೆ ಕಾರ್ಯಕ್ಷಮತೆ ಶ್ರೇಷ್ಠತೆ ಪ್ರಶಸ್ತಿ

Last Updated 31 ಜುಲೈ 2021, 15:49 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಕಾರ್ಯಕ್ಷಮತೆ ಶ್ರೇಷ್ಠತೆ ಪ್ರಶಸ್ತಿ–2020 ಲಭಿಸಿದೆ.

ಶನಿವಾರ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ (ಎಂಇಎಂಜಿ) ಮುಖ್ಯಸ್ಥರಾದ ಡಾ. ರಂಜನ್ ಆರ್.ಪೈ ಅವರು ಟ್ರೋಫಿ, ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ಕಸ್ತೂರಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ.ಮುತ್ತಣ್ಣ ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್, ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್, ಸಹ ಉಪ ಕುಲಪತಿ ಡಾ.ಪಿ.ಎಲ್.ಎನ್.ಜಿ. ರಾವ್, ಕುಲಸಚಿವ ಡಾ.ನಾರಾಯಣ ಸಭಾಹಿತ್, ಕೆಎಂಸಿ ಡೀನ್ ಡಾ. ಶರತ್ ಕೆ ರಾವ್, ಆಸ್ಪತ್ರೆಯ ಗುಣಮಟ್ಟ ಅನುಷ್ಠಾನದ ಸಲಹೆಗಾರ ಡಾ. ಸುನೀಲ್ ಸಿ. ಮುಂಡ್ಕೂರ್ ಉಪಸ್ಥಿತರಿದ್ದರು.

ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಯು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಒಂದಾಗಿದ್ದು, ಐಎಂಸಿಯ ಮಾಜಿ ಅಧ್ಯಕ್ಷ ಹಾಗೂ ಪ್ರಸಿದ್ಧ ಉದ್ಯಮಿ ದಿ.ರಾಮಕೃಷ್ಣ ಬಜಾಜ್ ಅವರ ಸ್ಮರಣಾರ್ಥ ನೀಡಲಾಗುತ್ತದೆ. ಕಠಿಣ ತರಬೇತಿ ಮತ್ತು ಮೌಲ್ಯಮಾಪನದ ಆಧಾರದ ಮೇಲೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಷ್ಠಿತ ಪ್ರಶಸ್ತಿ ಸಿಗಲು ಕಾರಣವಾದ ಕಸ್ತೂರಬಾ ಆಸ್ಪತ್ರೆಯ ತಂಡವನ್ನು ಮಾಹೆ ಮಣಿಪಾಲದ ಉನ್ನತ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಸಾಮಾಜಿಕ ಜವಾಬ್ದಾರಿ, ನೈತಿಕ ಮತ್ತು ಪಾರದರ್ಶಕ ಆರೋಗ್ಯ ಸೇವೆ, ಕ್ರಿಯಾತ್ಮಕ ನಾಯಕತ್ವ, ರೋಗಿ ಕೇಂದ್ರಿತ ಸೇವೆ, ಉದ್ಯೋಗಿಗಳ ದೃಷ್ಟಿಕೋನ, ಅತ್ಯುತ್ತಮ ಸಂಶೋಧನೆ ಮತ್ತು ತಾಂತ್ರಿಕ ಪರಿಣತಿಯೊಂದಿಗೆ ಎಲ್ಲ ಸೇವೆಗಳನ್ನು ಕೈಗೆಟುಕುವ ದರದಲ್ಲಿ ಒಂದೇ ಸೂರಿನಡಿ ಒದಗಿಸುತ್ತಿರುವ ಅಂಶವನ್ನು ಗಮನಿಸಿ ಕೆಎಂಸಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT