ಬ್ರಹ್ಮಾವರ: ಇಲ್ಲಿಗೆ ಸಮೀಪದ ಕೋಡಿತಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೋಣೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಶಾಲೆಯ ಹಳೆಯ ವಿದ್ಯಾರ್ಥಿ, ಮೈಸೂರಿನ ನಿವಾಸಿ ಭಾನುಮತಿ ಅವರು ಶಾಲೆಗೆ ಕಂಪ್ಯೂಟರ್ ನೀಡಿದ್ದು, ಬೆಂಗಳೂರಿನ ಜಯವರ್ಧನ ಅವರು ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದು, ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಬಳಿಕ ಮಾತನಾಡಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ದಾನಿಗಳ ಸಹಕಾರವಿದ್ದರೇ ಮಾತ್ರ ಸರ್ಕಾರಿ ಶಾಲೆಗಳು ಅಭಿವೃದ್ಧಿಯನ್ನು ಕಾಣುತ್ತವೆ. ಸರ್ಕಾರದೊಂದಿಗೆ ದಾನಿಗಳ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೋಡಿ ತಲೆ ಶಾಲೆಯ ಮುಖ್ಯ ಶಿಕ್ಷಕಿ ಟಿ.ನಾಗರತ್ನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಗೀತಾ ಖಾರ್ವಿ, ಮಾಜಿ ಸದಸ್ಯರಾದ ಕೃಷ್ಣ ಪೂಜಾರಿ, ಅಣ್ಣಪ್ಪ ಕುಂದರ್, ಮುಖಂಡರಾದ ಸುಧೀರ್ ಕುಮಾರ್, ಸುದಿನ, ಗುತ್ತಿಗೆದಾರ ಉದಯ್ ಕಾಂಚನ್, ಶಿಕ್ಷಕಿ ಸುಪ್ರಿತಾ, ಹೇಮಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-1181728233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.