ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲ್ಲೂರು: ಮೂಕಾಂಬಿಕೆಯ ಜನ್ಮಾಷ್ಟಮಿ, ಭಕ್ತ ಸಾಗರ

Published 14 ಜೂನ್ 2024, 12:43 IST
Last Updated 14 ಜೂನ್ 2024, 12:43 IST
ಅಕ್ಷರ ಗಾತ್ರ

ಕುಂದಾಪುರ (ಉಡುಪಿ): ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನದಲ್ಲಿ ಶುಕ್ರವಾರ ಮೂಕಾಂಬಿಕೆ ದೇವಿಯ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಜನ್ಮಾಷ್ಟಮಿಯ ಅಂಗವಾಗಿ ಬೆಳಿಗ್ಗೆಯಿಂದಲೇ ಕಟ್ಟುಕಟ್ಟಳೆ ಪೂಜೆಯ ಜತೆಗೆ ವಿಶೇಷ ಪೂಜೆ ಹಾಗೂ ಉತ್ಸವ ನಡೆಸಲಾಯಿತು. ರಾತ್ರಿ ದೇವಳದ ಪ್ರಾಂಗಣದ ಒಳ ಭಾಗದಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ರಥೋತ್ಸವ ನಡೆಸಲಾಯಿತು. ಮಧ್ಯಾಹ್ನ ಹಾಗೂ ರಾತ್ರಿ ನಡೆದ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು.

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ದೇವಿಯ ದರ್ಶನ ಪಡೆದುಕೊಂಡು ಋತ್ವಿಜರ ಮೂಲಕ ವಿವಿಧ ಪೂಜೆ ಸಲ್ಲಿಸಿದರು. ಜನ್ಮಾಷ್ಟಮಿ ಅಂಗವಾಗಿ ನವ ಚಂಡಿಕಾ ಯಾಗ ನಡೆಯಿತು.

ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಕುಂದಾಪುರ ಉಪವಿಭಾಗಾಧಿಕಾರಿ ಎಸ್‌.ಆರ್.ರಶ್ಮಿ, ಕಾರ್ಯನಿರ್ಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ ನೇತೃತ್ವದಲ್ಲಿ ಉತ್ಸವ ನಡೆಯಿತು. ತಂತ್ರಿ ನಿತ್ಯಾನಂದ ಅಡಿಗ, ಋತ್ವಿಜರಾದ ಕೆ.ಎನ್.ಗೋವಿಂದ ಅಡಿಗ, ಕೆ.ಎನ್.ಸುಬ್ರಹ್ಮಣ್ಯ ಅಡಿಗ, ವಿಘ್ನೇಶ್ ಅಡಿಗ ನೇತೃತ್ವದಲ್ಲಿ ಧಾರ್ಮಿಕ ಪೂಜಾವಿಧಿಗಳು ನಡೆದವು.

ಉತ್ಸವದ ಅಂಗವಾಗಿ ದೇಗುಲವನ್ನು ಪುಷ್ಪಗಳಿಂದ, ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ತಮಿಳುನಾಡು ಕಾಂಗ್ರೆಸ್ ಮುಖಂಡ ಭಾರ್ಗವ್, ಬಿಜೆಪಿ ಮುಖಂಡ ಜಿ.ವಿ.ರಾಜೇಶ್, ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ಡಾ.ಅಭಿಲಾಷ್ ಮಂಗಳೂರು, ಶರ್ಮಿಳಾ ಆಚಾರ್ಯ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಮುರಳೀಧರ ಶೆಟ್ಟಿ ಇಂದ್ರಾಳಿ, ಎನ್‌ಎಸ್ಐಯು ಮುಖಂಡ ಸುಜನ್‌ಕುಮಾರ ಶೆಟ್ಟಿ ಕುಂದಾಪುರ ದೇವಿಯ ದರ್ಶನ ಪಡೆದು, ಸೇವೆ ಸಲ್ಲಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಅಂಗವಾಗಿ ನಡೆದ ವಿಶೇಷ ಬಲಿ ಉತ್ಸವದಲ್ಲಿ ದೇವಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಉತ್ಸವ ನಡೆಸಲಾಯಿತು
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಅಂಗವಾಗಿ ನಡೆದ ವಿಶೇಷ ಬಲಿ ಉತ್ಸವದಲ್ಲಿ ದೇವಿಯನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಉತ್ಸವ ನಡೆಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT