ಉಡುಪಿ : ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಇದರ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2025, ಪುಸ್ತಕ ಬಿಡುಗಡೆ ಮತ್ತು ಸಾಕ್ಷ ಚಿತ್ರ ಬಿಡುಗಡೆ ಕಾರ್ಯಕ್ರಮ ಭಾನುವಾರ ಅಂಬಲಪಾಡಿಯ ಭವಾನಿ ಮಂಟಪದಲ್ಲಿ ನಡೆಯಿತು.

ಅಂಬಲಪಾಡಿ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ ಮಾತನಾಡಿ, ಉಡುಪಿಯು ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವೈಶಿಷ್ಟ ಪೂರ್ಣವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವ ಕಾರಣ ನಮ್ಮ ಆಚಾರ ವಿಚಾರ, ಸಂಸ್ಕೃತಿಗಳ ಪರಿಚಯ ಇತರರಿಗೂ ಪ್ರಸಾರವಾಗುತ್ತಿದೆ ಎಂದರು.

ಕವಿ ಶಶಿ ತರಿಕೆರೆ ಅವರ ಪರವಾಗಿ ಪತ್ನಿ ರಶ್ಮಿ ತರಿಕೆರೆ ಅವರು ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಮಂಜುಶ್ರೀ ಕೃಷ್ಣ ಭಟ್ ಅವರ ‘ಜೀವನ ಧರ್ಮ’ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪತ್ರಕರ್ತ ಎಸ್. ನಿತ್ಯಾನಂದ ಪಡ್ರೆ, ಶಿಕ್ಷಣ ತಜ್ಞ ರಂಗಪ್ಪಯ್ಯ ಹೊಳ್ಳ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ , ಅಧ್ಯಕ್ಷ ಪ್ರೊ. ಶಂಕರ್ ಉಪಸ್ಥಿತರಿದ್ದರು.

ಪೂರ್ಣಿಮಾ ಜನಾದ೯ನ್ ಸ್ವಾಗತಿಸಿದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಸ್ತಾವನೆಗೈದರು. ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಸ್ಥಾಪಕ ಅಧ್ಯಕ್ಷ ನಾರಾಯಣ ಮಡಿ ವಂದಿಸಿದರು. ರಂಜನಿ ವಸಂತ್ ಪ್ರಾರ್ಥಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.

ನಂತರ ಉರಗ ತಜ್ಞ ಗುರುರಾಜ್ ಸನಿಲ್ ಅವರ ಸಾಕ್ಷ್ಯಚಿತ್ರವನ್ನು ಕಾಯ೯ಕ್ರಮದ ಸಂಯೋಜಕ ಅವಿನಾಶ್ ಕಾಮತ್ ಉಪಸ್ಥಿತಿಯಲ್ಲಿ ಶಿವರಾಮ ಕಾರಂತ ಪ್ರತಿಷ್ಟಾನದ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.