ಮಂಗಳವಾರ, ಸೆಪ್ಟೆಂಬರ್ 21, 2021
22 °C

ಉಡುಪಿ: ಕೂರಾಡಿ ಸದಾಶಿವ ಕಲ್ಕೂರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ತಾಳಮದ್ದಲೆ ಅರ್ಥದಾರಿ ಹಾಗೂ ಚಿಂತಕ ಕೂರಾಡಿ ಸದಾಶಿವ ಕಲ್ಕೂರ (86) ಮಂಗಳವಾರ ರಾತ್ರಿ ಅಲೆವೂರಿನಲ್ಲಿ ನಿಧನರಾದರು.

ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಯಕ್ಷಗಾನ ಹಾಗೂ ಸಾಮಾಜಿಕ ಸ್ಥಿತಿ–ಗತಿಗಳ ಕುರಿತು ‘ಬಿತ್ತಿದಂತೆ ಬೆಳೆ’ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಶಿವರಾಮ ಕಾರಂತ, ಬೈಕಾಡಿ ವೆಂಕಟಕೃಷ್ಣ ರಾವ್, ಗೋಪಾಲಕೃಷ್ಣ ಅಡಿಗರು ಸೇರಿದಂತೆ ಹಲವು ಸಾಹಿತಿಗಳೊಂದಿಗೆ ಸದಾಶಿವ ಕಲ್ಕೂರ ಒಡನಾಟ ಹೊಂದಿದ್ದರು.

ಕೂರಾಡಿಯಲ್ಲಿ ‘ಸಂಸ್ಕೃತಿ ಸಂಘ' ಕಟ್ಟಿ ಗ್ರಾಮೀಣ ಭಾಗಕ್ಕೆ ನಾಡಿನ ಶ್ರೇಷ್ಠ ಸಾಹಿತಿಗಳನ್ನು ಕರೆಸಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದರು. ತಾಳಮದ್ದಲೆಯ ಅರ್ಥಧಾರಿಯಾಗಿ ಕಲಾ ಸೇವೆ ಮಾಡಿದ ಸದಾಶಿವ ಕಲ್ಕೂರ ಅವರನ್ನು ಯಕ್ಷಗಾನ ಕಲಾರಂಗ, ಅಂಬಲಪಾಡಿ ಯಕ್ಷಗಾನ ಸಂಘ ಸೇರಿದಂತೆ ಹಲವಾರು ಸಂಸ್ಥೆಗಳು ಗೌರವಿಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು