ಉಡುಪಿ: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ರೋಗಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೊರೊನಾ ಸೋಂಕು ತಗುಲಿರುವ ಸಾಧ್ಯತೆಗಳು ಇಲ್ಲ. ಚೀನಾದಿಂದ ಬಂದಿದ್ದಾರೆ ಎಂಬ ಕಾರಣಕ್ಕೆ ರೋಗಿಗಳ ಕಫ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರಲಿದೆ ಎಂದರು.

ಸಾರ್ವಜನಿಕರು ಗಾಬರಿ ಪಡಬೇಕಿಲ್ಲ. ವದಂತಿಗಳಿಗೆ ಕಿವಿಗೊಡಬಾರದು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್ಗಳ ವ್ಯವಸ್ಥೆ ಇದೆ. ಅಗತ್ಯ ಮಾಸ್ಕ್ಗಳು ಇವೆ ಎಂದು ಡಿಎಚ್ಒ ತಿಳಿಸಿದ್ದಾರೆ.

ಹಿನ್ನೆಲೆ

ಒಂದೇ ಕುಟುಂಬದ ಮೂವರು 15 ದಿನಗಳ ಹಿಂದೆ ಚೀನಾ ಪ್ರವಾಸ ಮುಗಿಸಿ ಉಡುಪಿಗೆ ಬಂದಿದ್ದರು. ಈ ವೇಳೆ ಅವರಿಗೆ ಶೀತ, ಗಂಟಲು ಸೋಂಕು ಕಾಣಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.