ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ25 ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮಹತ್ವದ ಹೆಜ್ಜೆ ಇರಿಸಿದ್ದು 250 ಹೊಸ ವಿದ್ಯಾರ್ಥಿ ನಿಲಯಗಳನ್ನು ತೆರೆಯುವ ಆರ್ಥಿಕ ಹೊರೆ ತಪ್ಪಿಸಲಾಗಿದೆ. ಶೇ 25ರಷ್ಟು ಪ್ರವೇಶಾವಕಾಶ ಹೆಚ್ಚಿಸುವುರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ವಿದ್ಯಾಸಿರಿ ಯೋಜನೆಗೆ ಒದಗಿಸಲಾಗುವ ಅನುದಾನದಿಂದ ಬಳಸಿಕೊಳ್ಳುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪ್ರಸಕ್ತ ಸಾಲಿನಲ್ಲಿಯೇ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಯೋಜನೆ ಅನುಷ್ಠಾನಕ್ಕೆ ₹ 54.20 ಕೋಟಿ ಅನುದಾನ ಬೇಕಾಗಿದ್ದು, ತುರ್ತಾಗಿ ₹ 7.50 ಕೋಟಿ ಒದಗಿಸುವಂತೆ ಹಾಗೂ ಸಂಖ್ಯಾಬಲ ಹೆಚ್ಚಳದ ಜೊತೆಯಲ್ಲಿ ಅಗತ್ಯವಿರುವ 190 ಅಡುಗೆಯವರು, 328 ಅಡುಗೆ ಸಹಾಯಕರು ಸೇರಿ 518 ಹುದ್ದೆಗಳನ್ನು ಸೃಜಿಸಲು ಕೋರಲಾಗಿತ್ತು. ಆರ್ಥಿಕ ಇಲಾಖೆಯು ಪ್ರಸ್ತಾವನೆಗೆ ಸಹಮತಿ ನೀಡಿರುವುದರಿಂದ ಅನುಷ್ಠಾನ ಕಾರ್ಯ ಶೀಘ್ರವೇ ಆಗಲಿದೆ ಎಂದು ತಿಳಿಸಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.