ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಟ: ಜಿಲ್ಲಾ ಸಾಹಿತ್ಯ ಸಮ್ಮೇಳನ ಡಿ. 5, 6ರಂದು

Published 25 ನವೆಂಬರ್ 2023, 15:32 IST
Last Updated 25 ನವೆಂಬರ್ 2023, 15:32 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕೋಟ ವಿವೇಕ ವಿದ್ಯಾಸಂಘದ ಸಹಕಾರದಲ್ಲಿ, ವಿವೇಕ ವಿದ್ಯಾಲಯದ ಆವರಣದಲ್ಲಿ ಡಿ.5, 6ರಂದು ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ತಿಳಿಸಿದ ಅವರು, ಸಮ್ಮೇಳನದ ಪ್ರಯುಕ್ತ ಡಿ.5 ರಂದು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಿಂದ ಕೋಟ ವಿವೇಕ ವಿದ್ಯಾಸಂಸ್ಥೆ ತನಕ ಪುರಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕೋಟ ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಎ. ಪ್ರಭಾಕರ ಮಯ್ಯ ಪುಸ್ತಕ ಮಳಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ಕವಿಗೋಷ್ಠಿ, 3 ಗಂಟೆಗೆ ಕುಂದಾಪ್ರ ಭಾಷಿ ಕುರಿತು ಮನು ಹಂದಾಡಿ ಅವರಿಂದ ಗೋಷ್ಠಿ, ಶತಮಾನದ ಅಚ್ಚರಿ ಕೋಟ ಲಕ್ಷ್ಮೀ ನಾರಾಯಣ ಕಾರಂತ ಮತ್ತು ಆಡಳಿತದಲ್ಲಿ ಕನ್ನಡ ವಿಚಾರಗೋಷ್ಠಿ, ನಾಟಕ ಪ್ರದರ್ಶನ ನಡೆಯಲಿದೆ.

ಡಿ.6 ರಂದು ಬೆಳಿಗ್ಗೆ 10 ಗಂಟೆಗೆ ಕವಿಗೋಷ್ಠಿ, ಸಮ್ಮೇಳನಾಧ್ಯಕ್ಷರೊಂದಿಗೆ ಮಾತು-ಕತೆ, ಶಿಕ್ಷಣ, ಶಿಕ್ಷಕ -ವ್ಯವಸ್ಥೆ ವಿಚಾರಗೋಷ್ಠಿ ಮತ್ತು ಮಧ್ಯಾಹ್ನ 1.30 ಕ್ಕೆ ಚಿಣ್ಣರ ಜಗುಲಿ ಬಹುವಿಧ ಗೋಷ್ಠಿ ಅನಂತರ ಯಕ್ಷಗಾನ ಪ್ರಸಂಗದ ಕುರಿತು ವಿಚಾರಗೋಷ್ಠಿ, 3ಕ್ಕೆ ಬಹಿರಂಗ ಅಧಿವೇಶನ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮತ್ತು ಸಮಾರೋಪ ನಡೆಯಲಿದೆ ಎಂದರು.

ಆಮಂತ್ರಣ ಬಿಡುಗಡೆ: ಇದೇ ಸಂದರ್ಭ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯನ್ನು ವಿವೇಕ ವಿದ್ಯಾಸಂಘದ ಆಡಳಿತ ಮಂಡಳಿ ಕಾರ್ಯದರ್ಶಿ ರಾಮದೇವ ಐತಾಳ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕ.ಸಾ.ಪ. ಪದಾಧಿಕಾರಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ರಾಮಚಂದ್ರ ಐತಾಳ, ಮನೋಹರ ಪಿ., ಉಪೇಂದ್ರ ಸೋಮಯಾಜಿ, ಸುಜಯೀಂದ್ರ ಹಂದೆ, ಅಚ್ಯುತ ಪೂಜಾರಿ, ವಿವೇಕ ಪಿಯು ಕಾಲೇಜು ಪ್ರಾಂಶುಪಾಲ ಜಗದೀಶ ನಾವಡ, ಮಂಜುನಾಥ ಉಪಾಧ್ಯ, ಜಗದೀಶ ಹೊಳ್ಳ, ಭಾಸ್ಕರ ಆಚಾರ್ಯ, ವೆಂಕಟೇಶ ಉಡುಪ, ಸಂಜೀವ ಗುಂಡ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT