ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ಕೋಟದಿಂದ ತೆಕ್ಕಟ್ಟೆಗೆ ಜಾಥಾ

ಕೋಟ ಮತ್ತು ಕುಂದಾಪುರ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜನೆ
Last Updated 10 ಆಗಸ್ಟ್ 2022, 4:37 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ): ಕೋಟ ಮತ್ತು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ಸೋಮವಾರ ಮಾಬುಕಳದಿಂದ ತೆಕ್ಕಟ್ಟೆವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸುವ, ದೇಶಪ್ರೇಮದ ಸಂದೇಶವನ್ನು ಸಾರುವ ಸಲುವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯಾದ್ಯಂತ ಜಾಥಾ ಆಯೋಜಿಸಲಾಗಿದೆ’ ಎಂದರು.

ಕೋಟ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶಂಕರ್‌ ಕುಂದರ್‌ ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಬಹುದೊಡ್ಡ ಕೊಡುಗೆ ನೀಡಿದೆ. 6 ದಶಕಗಳಿಂದ ಸಂವಿಧಾನಬದ್ಧವಾದ ಆಡಳಿತ ನಡೆಸಿಕೊಂಡು ಬಂದಿದೆ’ ಎಂದರು.

ಜಾಥಾವು ಕೋಟ ಬ್ಲಾಕ್‌ ಕಾಂಗ್ರೆಸ್‌ ಇಂದಿರಾ ಕಚೇರಿಯಿಂದ ಹೊರಟು, ಸಾಲಿಗ್ರಾಮ ಪೇಟೆಯ ಆಂಜನೇಯ ದೇವಸ್ಥಾನದ ಮಾರ್ಗದ ಮೂಲಕ ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ನ ತೆಕ್ಕಟ್ಟೆಯಲ್ಲಿ ಸಮಾರೋಪಗೊಂಡಿತು.

ಉಡುಪಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೋಟ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಎ. ಕುಂದರ್, ಕುಂದಾಪುರ ಬ್ಲಾಕ್ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್, ಪಾರಂಪಳ್ಳಿ ಶ್ರೀನಿವಾಸ್ ಅಮೀನ್‌, ಬಾಲಕೃಷ್ಣ ಪೂಜಾರಿ, ಮಲ್ಲಿಕಾ ಪೂಜಾರಿ, ದಿನೇಶ್ ಬಂಗೇರ, ಗಣೇಶ್ ನೆಲ್ಲಿಬೆಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT