ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಸ್ಥೆಯ ಚಟುವಟಿಕೆ ರೈತರಿಗೆ ಚೈತನ್ಯ’

ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ
Last Updated 3 ಡಿಸೆಂಬರ್ 2022, 14:26 IST
ಅಕ್ಷರ ಗಾತ್ರ

ಕೋಟ(ಬ್ರಹ್ಮಾವರ): ಪಂಚವರ್ಣ ಸಂಘಟನೆಯ ರೈತಪರ ಹಾಗೂ ಪರಿಸರ ಪ್ರಜ್ಞೆ ಶ್ಲಾಘನೀಯ ಎಂದು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು.

ಕೋಟ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರಿನ ಗೀತಾನಂದ ಫೌಂಡೇಷನ್, ಕೋಟ ರೈತ ಧ್ವನಿ ಸಂಘ, ಕಾರ್ಕಡ ಗೆಳೆಯರ ಬಳಗ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್, ಸಾಲಿಗ್ರಾಮದ ವಿಪ್ರ ಮಹಿಳಾ ಬಳಗದ ಸಹಯೋಗದಲ್ಲಿ ತಿಂಗಳ ಸರಣಿ ಕಾರ್ಯಕ್ರಮ ‘ರೈತರೆಡೆಗೆ ನಮ್ಮ ನಡಿಗೆ’ಯ 20ನೇ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಂದು ಸಂಸ್ಥೆಯಾಗಿ ರೈತಾಪಿ ವರ್ಗಕ್ಕೆ ಚೈತನ್ಯ ತುಂಬುವ ಜೊತೆಗೆ ಕೃಷಿ ಸಂಸ್ಕಾರಕ್ಕೆ ಉತ್ತೇಜನ ನೀಡುತ್ತಿದೆ. ಇದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಂಘ–ಸಂಸ್ಥೆಗಳ ಕ್ರಿಯಾಶೀಲತೆ ಇಂತಹ ಕಾರ್ಯಕ್ರಮಗಳಿಗೆ ವೇದಿಕೆಯಾಗುತ್ತಿರುವುದು ಶ್ಲಾಘನೀಯ ಎಂದರು.

ಕೃಷಿ ಮತ್ತು ಸಹಕಾರಿ ಕ್ಷೇತ್ರದ ಸಾಧಕ ಕೋಟ ಸಿ.ಎ. ಬ್ಯಾಂಕ್ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಅವರನ್ನು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ. ಕುಂದರ್ ಗೌರವಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರವೀಂದ್ರ ಮೊಗವೀರ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಕೃಷಿ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ, ಕೋಟ ಸಿ.ಎ. ಬ್ಯಾಂಕ್ ನಿರ್ದೇಶಕ ಟಿ.ಮಂಜುನಾಥ ಗಿಳಿಯಾರು, ಕೋಟ ಸಿ.ಎ. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವ್ಯವಸ್ಥಾಪಕ ಕುಮಾರ್ ಕೋಟ, ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಕಾರ್ಕಡ ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಅಧ್ಯಕ್ಷ ಅರುಣ್ ಕುಂದರ್, ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ರಾಜೇಂದ್ರ ಸುವರ್ಣ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಯಕ್ಷಸೌರಭ ಕಲಾರಂಗದ ಸತ್ಯನಾರಾಯಣ ಆಚಾರ್ಯ, ಹಂದಟ್ಟು ಮಹಿಳಾ ಬಳಗದ ಶಕೀಲ ಪೂಜಾರಿ ಇದ್ದರು.

ಪಂಚವರ್ಣದ ಸಂಚಾಲಕ ಅಜಿತ್ ಆಚಾರ್ಯ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು. ಸುಜಾತಾ ಬಾಯರಿ ನಿರೂಪಿಸಿದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಪೂಜಾರಿ ಸನ್ಮಾನಪತ್ರ ವಾಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT