ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್.ಎಲ್‌. ಭೈರಪ್ಪಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

Last Updated 24 ಸೆಪ್ಟೆಂಬರ್ 2020, 11:36 IST
ಅಕ್ಷರ ಗಾತ್ರ

ಉಡುಪಿ: 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು.

ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.‌

ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದಿಂದ 2005ರಿಂದ ಪ್ರಶಸ್ತಿ ನೀಡಲಾಗುತ್ತಿದೆ. ರವಿ ಬೆಳಗೆರೆ, ವೀರಪ್ಪಮೊಯ್ಲಿ, ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ಸಾಲುಮರದ ತಿಮ್ಮಕ್ಕ, ನಟ ಪ್ರಕಾಶ್ ರೈ ಸಹಿತ 15 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೋಟ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ಯ, ಕೋಟ ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಕೋಟತಟ್ಟು ಪಂಚಾಯಿತಿ ಪಿಡಿಒ ಶೈಲಾ ಎಸ್. ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT