ಕಮಿಷನ್ ಆರೋಪ: ಹೆಸರು ಬಹಿರಂಗಪಡಿಸಲು ದಿಂಗಾಲೇಶ್ವರ ಶ್ರೀಗಳಿಗೆ ಸಚಿವ ಕೋಟ ಆಗ್ರಹ

ಉಡುಪಿ: ಸರ್ಕಾರದಿಂದ ಮಠಗಳಿಗೆ ಬಿಡುಗಡೆಯಾದ ಅನುದಾನ ಪಡೆದುಕೊಳ್ಳಲು ಯಾವ ಇಲಾಖೆಯ ಅಧಿಕಾರಿ ಹಣ ಕೇಳಿದ್ದಾರೆ ಎಂದು ದಿಂಗಾಲೇಶ್ವರ ಶ್ರೀಗಳು ಸ್ಪಷ್ಟಪಡಿಸಿದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಿಂದುಳಿದ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಪ್ರೆಸ್ಕ್ಲಬ್ ಬಳಿ ಮಾತನಾಡಿದ ಸಚಿವರು ‘ಏಪ್ರಿಲ್ ಮೊದಲ ವಾರದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ 65 ಮಠಗಳಿಗೆ ₹ 119 ಕೋಟಿ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಆದೇಶ ಮಾಡಿದ್ದಾರೆ, ಆದರೆ, ಇನ್ನೂ ಹಣ ಬಿಡುಗಡೆಯಾಗಿಲ್ಲ. ಬಿಡುಗಡೆಯಾಗಬೇಕಾದರೆ ಅಧಿಕಾರಿಗಳು ಸಂಬಂಧಿತ ಮಠಗಳಿಗೆ ಭೇಟಿನೀಡಿ ದಾಖಲೆಗಳನ್ನು ಪರಿಶೀಲಿಸಿ ಯೋಜನಾ ವರದಿ ಸಿದ್ಧಪಡಿಸಬೇಕು. ಇಲ್ಲಿಯವರೆಗೂ ಒಂದು ಪೈಸೆ ಕೂಡ ಇಲಾಖೆಯಿಂದ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.
‘ಸಮಾಜಕ್ಕೆ ಸಾಧು ಸಂತರು ಸಂದೇಶ ನೀಡುವಾಗ ಗೊಂದಲಗಳಿರಬಾರದು. ದಿಂಗಾಲೇಶ್ವರ ಶ್ರೀಗಳು ನಿರ್ಧಿಷ್ಟವಾಗಿ ಯಾವ ವಿಚಾರ, ಕಾಮಗಾರಿ, ಇಲಾಖೆ ಹಾಗೂ ಅಧಿಕಾರಿಯ ಹೆಸರು ಹೇಳಿದರೆ ಸಮಗ್ರವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಪಾರದರ್ಶಕ ಹಾಗೂ ಗುಣಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಆರೋಪ ಮಾಡುವ ಅಧಿಕಾರ ಇದೆ. ಆದರೆ, ಸತ್ಯಕ್ಕೆ ಅಪಚಾರವಾಗದಂತೆ ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದರು.
ಇವನ್ನೂ ಓದಿ...
ಭಾವೈಕ್ಯತಾ ದಿನಕ್ಕೆ ವಿರೋಧ: ದಿಂಗಾಲೇಶ್ವರರನ್ನು ತರಾಟೆ ತೆಗೆದುಕೊಂಡ ಸಿ.ಸಿ.ಪಾಟೀಲ
‘ಭಾವೈಕ್ಯ ದಿನ’ ಘೋಷಣೆಗೆ ದಿಂಗಾಲೇಶ್ವರ ಸ್ವಾಮೀಜಿ ತಕರಾರು
ಅನುದಾನ ಪಡೆಯಲು ಮಠಗಳೂ ಶೇ 30 ರಷ್ಟು ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಸ್ವಾಮೀಜಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.