ಮಂಗಳವಾರ, ಅಕ್ಟೋಬರ್ 27, 2020
19 °C

ಸಂಪುಟ ಪುನಾರಚನೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Kota Srinivas Poojary

ಉಡುಪಿ: ಸಚಿವ ಸಂಪುಟದಲ್ಲಿ ಯಾರು ಇರಬೇಕು, ಯಾರು ಇರಬಾರದು ಎಂಬ ತೀರ್ಮಾನವನ್ನು ಕೈಕಮಾಂಡ್‌ ತೆಗೆದುಕೊಳ್ಳಲಿದ್ದು, ನಿರ್ಧಾರಕ್ಕೆ ಬದ್ಧವಿರುವುದಾಗಿ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾರ್ಕಳದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಸ್ಥಾನಕ್ಕೆ ಚ್ಯುತಿ ಇಲ್ಲ ಎಂಬುದನ್ನು ಹೇಳಬಲ್ಲೆ. ಸಂಪುಟ ಪುನಾರಚನೆ ಬಗ್ಗೆ ಎರಡ್ಮೂರು ದಿನಗಳಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವರಿಷ್ಠರ ಬಳಿ ಚರ್ಚಿಸಲಿದ್ದಾರೆ ಎಂದು ಕೋಟ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು