ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಎನ್‌ಐಎ ಶಾಶ್ವತ ಕೇಂದ್ರ ಸ್ಥಾಪನೆ: ಕೋಟ ಶ್ರೀನಿನಾಸ ಪೂಜಾರಿ

Last Updated 6 ಆಗಸ್ಟ್ 2021, 15:41 IST
ಅಕ್ಷರ ಗಾತ್ರ

ಉಡುಪಿ: ಕರಾವಳಿಯಲ್ಲ ಉಗ್ರರ ಜಾಲ ವಿಸ್ತರಣೆಯಾಗುತ್ತಿದ್ದು, ಭಟ್ಕಳದಿಂದ ಕೇರಳದ ವರೆಗೂ ಭಯೋತ್ಪಾದಕರ ಸಂಪರ್ಕ ಕೊಂಡಿ ಹಬ್ಬಿದೆ. ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟಹಾಕಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ಮಾತನಾಡಿದ ಅವರು, ಕರಾವಳಿಯಲ್ಲಿ ಎನ್‌ಐಎ ಶಾಶ್ವತ ಕೇಂದ್ರ ಸ್ಥಾಪನೆಯ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಮೂವರು ಒಟ್ಟಾಗಿ ಜನರ ಸಮಸ್ಯೆಗೆ ಸ್ಪಂದಿಸುತ್ತೇವೆ. ಪಾರದರ್ಶಕ, ಜನಪರ ಮತ್ತು ಕ್ರಿಯಾಶೀಲ ಆಡಳಿತ ನೀಡುವುದು ಗುರಿ. ಯಾರು ಯಾವ ಖಾತೆ ನಿಭಾಯಿಸಬಲ್ಲರು ಎಂದು ನಿರ್ಧರಿಸಿ ಮುಖ್ಯಮಂತ್ರಿ ಖಾತೆ ಹಂಚಿಕೆ ಮಾಡಲಿದ್ದು, ಸಿಗುವ ಖಾತೆಯಲ್ಲಿ ಜನಪರ ಕೆಲಸ ಮಾಡುತ್ತೇನೆ ಎಂದರು

ಕೋವಿಡ್ ನಿಯಂತ್ರಣ ಹಾಗೂ ನೆರೆ ಸಮಸ್ಯೆ ಮುಂದಿರುವ ಸವಾಲುಗಳಾಗಿದ್ದು, ಎಲ್ಲ ಸಚಿವರಿಗೂ ಜವಾಬ್ದಾರಿ ನೀಡಲಾಗಿದೆ. ಕೊಡಗು ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿದ್ದು, ಸಂಜೆಯವರೆಗೆ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿ ಜಿಲ್ಲೆಗೆ ಬಂದಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT