ಉಡುಪಿ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಕುರಿತು ಸಮಗ್ರ ಜಾಗೃತಿ ಮೂಡಿಸಲಾಗುತ್ತಿದ್ದು, ಎಲ್ಲಾ ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರಿಗಾಗಿ ಜಾರಿಗೆ ತಂದಿರುವ ಈ ಅಭಿಯಾನದ ಸದುಪಯೋಗವನ್ನು ಪಡೆದುಕೊಂಡು ಮಹಿಳೆಯರು ಉತ್ತಮ ಆರೋಗ್ಯ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ. ಕವಿತಾ ಅವರು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ. ಹುಬ್ಬಳ್ಳಿ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ನಿರೂಪಿಸಿದರು. ಸುಧೀಂದ್ರ ವಂದಿಸಿದರು.

ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಸಕಾಲದಲ್ಲಿ ಪಡೆದುಕೊಂಡು ಪ್ರಧಾನಿ ಅವರ ಕನಸಿನ ಭಾರತವನ್ನು ನಿರ್ಮಿಸುವಲ್ಲಿ ಎಲ್ಲರು ಸಹಕಾರ ನೀಡಬೇಕು.
-ಕೋಟ ಶ್ರೀನಿವಾಸ ಪೂಜರಿ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.