ಮಂಗಳವಾರ, ನವೆಂಬರ್ 24, 2020
22 °C

ಸಿದ್ದರಾಮಯ್ಯ ಹಗಲುಗನಸು ಕಾಣುವುದನ್ನು ನಿಲ್ಲಿಸಲಿ: ಕೋಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಹಗಲುಗನಸು ಕಾಣುವುದನ್ನು ಸಿದ್ದರಾಮಯ್ಯ ಅವರು ನಿಲ್ಲಿಸಲಿ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಸಂಕಷ್ಟದ ಕಾಲದಲ್ಲಿ ಯಡಿಯೂರಪ್ಪ ಸಮರ್ಥವಾಗಿ ಅಧಿಕಾರ ನಿರ್ವಹಿಸಿದ್ದಾರೆ. ಅವರು ಶಾಶ್ವತವಾಗಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ನಾಯಕರ ಸಹಮತವೂ ಯಡಿಯೂರಪ್ಪ ಅವರಿಗಿದೆ ಎಂದರು.

ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ಸಿಕ್ಕು, ಸಿದ್ದರಾಮಯ್ಯ ಅವರ ಮೇಲೆ ದೂರು ನೀಡಲು ದೆಹಲಿಗೆ ಹೋಗಿರಬಹುದು. ಡಿಕೆಶಿ ದೆಹಲಿ ಪ್ರವಾಸ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ವಿಜಯೇಂದ್ರ ಚುನಾವಣಾ ರಾಜಕೀಯ ಪ್ರವೇಶದ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಚುನಾವಣೆ ಹಾಗೂ ಪಕ್ಷ ಸಂಘಟನೆಯಲ್ಲಿ ವಿಜಯೇಂದ್ರ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೋಟ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು