ಶುಕ್ರವಾರ, ಆಗಸ್ಟ್ 19, 2022
25 °C
ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಅವಧಿ ಮುಗಿದ ದೇಗುಲಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಲ್ಲಿ ‘ಬಿ’ ಮತ್ತು ‘ಸಿ’ ವರ್ಗದ 52 ದೇವಸ್ಥಾನಗಳ ಅವಧಿ ಮುಗಿದಿದ್ದು ಆಡಳಿತಾಧಿಕಾರಿ ನೇಮಕಾತಿಯಾಗಿರುವ ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನಾ ಸಮಿತಿ ರಚಿಸಬೇಕು ಎಂದು ಅಧಿಕಾರಿಗಳಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್‌ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವಧಿಮುಗಿದ ದೇವಸ್ಥಾನಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶಕ್ಕೆ ಅನುಮೋದನೆ ನೀಡಲಾಗಿದೆ. ಶೀಘ್ರ ವ್ಯವಸ್ಥಾಪನಾ ಸಮಿತಿಯೂ ರಚನೆಯಾಗಬೇಕು ಎಂದರು.

ಜಿಲ್ಲೆಯಲ್ಲಿ ವೇದ ಪಾಠಶಾಲೆ ಆರಂಭಿಸುವ ಕುರಿತು ಸೂಕ್ತ ಸ್ಥಳ ಗುರುತಿಸುವಂತೆ ಸಮಿತಿಯ ಸದಸ್ಯರಿಗೆ ಸೂಚಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸದಸ್ಯರಿಗೆ ಗುರುತಿನ ಚೀಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ, ಜಿಲ್ಲೆಯಲ್ಲಿ ತಸ್ತೀಕ್ ಬಿಡುಗಡೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಧಾರ್ಮಿಕ ದತ್ತಿ ಇಲಾಖೆಯ ಪ್ರಭಾರ ಸಹಾಯಕ ಆಯುಕ್ತ ಶೇಷಪ್ಪ, ತಹಶೀಲ್ದಾರ್ ಸುಧಾಕರ್, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯರಾದ ಹರಿಪ್ರಸಾದ್ ಭಟ್, ರಾಮ್‌ಭಟ್, ವಾಸುದೇವ ಹಂಗಾರಕಟ್ಟೆ, ಶಾಲಿನಿ, ಸುನೀಲ್, ಪ್ರಣಯ್ ಶೆಟ್ಟಿ, ರಮಾಕಾಂತ ದೇವಾಡಿಗ, ಮೋಹನ ಉಪಾಧ್ಯಾಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.