ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಗಳಿದ್ದರೆ ದಾಖಲೆ ಕೊಡಿ, ನನ್ನನ್ನೂ ಸೇರಿ ತನಿಖೆಗೆ ಸಿದ್ಧ: ಪೂಜಾರಿ

ಆರೋಪಗಳಿದ್ದರೆ ದಾಖಲೆ ಕೊಡಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
Last Updated 19 ಏಪ್ರಿಲ್ 2022, 13:46 IST
ಅಕ್ಷರ ಗಾತ್ರ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಆರೋಪ ಮಾಡುವ ಹಕ್ಕುಗಳನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ. ನಿರ್ಧಿಷ್ಟವಾದ ಆರೋಪಗಳಿದ್ದರೆ ನನ್ನನ್ನೂ ಸೇರಿಸಿ ತನಿಖೆ ಮಾಡಿಸಲು ಸಿದ್ಧ ಎಂದು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸವಾಲು ಹಾಕಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಕಮಿಷನ್ ಆರೋಪದ ಬಗ್ಗೆಯೂ ಈಗಾಗಲೇ ಸರ್ಕಾರ ತನಿಖೆಗೆ ಆದೇಶಿಸಿದೆ ಎಂದು ಸಚಿವರು ಹೇಳಿದರು.

ಕೋಮುಗಲಭೆ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮಾಹಿತಿ ಸಿಕ್ಕರೆ ಬಿಗಿ ಭದ್ರತೆ ಮಾಡಲಾಗುತ್ತದೆ. ಆದರೂ ಕೆಲವು ಕಿಡಿಗೇಡಿಗಳು ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಮೂಲಕ ಜನರಲ್ಲಿ ವಿಕಾರ ಭಾವನೆ, ಧರ್ಮದ ದುರ್ಬೋಧನೆ ಮಾಡಿ ಸಮಾಜ ಒಡೆಯುವ, ಕಲ್ಲು ತೂರಾಟ ಮಾಡುವ, ಬೆಂಕಿ ಹಚ್ಚುವ ನಡೆಸುತ್ತಿದ್ದಾರೆ. ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಂಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಪುಂಡ, ಪೋಕರಿಗಳಿಗೆ ಮಟ್ಟಹಾಕುವ ಕೆಲಸವನ್ನು ಸರ್ಕಾರ ಸಮರ್ಥವಾಗಿ ಮಾಡುತ್ತಿದೆ ಎಂದರು.

ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ ಸಂಘಟನಾತ್ಮಕ ವಿಚಾರ ಹಾಗೂ ಚುನಾವಣೆ ಎದುರಿಸುವ ಕುರಿತು ಚರ್ಚೆ ನಡೆಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು, ಜನಾದೇಶದ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಉತ್ತರ ಕೊಡುವುದಾಗಿ ಕೋಟ ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಪಕ್ಷಕ್ಕೆ ಇರಿಸು ಮುರುಸು ಆಗಬಾರದು ಎಂಬ ಕಾರಣಕ್ಕೆ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣದ ತನಿಖೆಯೂ ನಡೆಯುತ್ತಿದೆ ಎಂದರು.

ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಯಾವ ದಾಕ್ಷಿಣ್ಯಕ್ಕೂ ಒಳಗಾಗದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶ ಕೊಡದಂತೆ ಹೆಜ್ಜೆ ಇಡುತ್ತಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT