ಬ್ರಹ್ಮಾವರ: ಕೋಟ ಗ್ರಾಮ ಪಂಚಾಯಿತಿಯ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ಗುರುವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಮೂಡುಗಿಳಿಯಾರು ಶಾಲೆ, ಮಣೂರು ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು, ಫಿಲ್ಟರ್ ಅಳವಡಿಸುವ ಕುರಿತು ಗಮನಕ್ಕೆತಂದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಬಂಗೇರ ಅವರು ಮುಖ್ಯ ಶಿಕ್ಷಕರ ಮೂಲಕ ಮನವಿಯ ಮೇರೆಗೆ ಒದಗಿಸಲಾಗುವುದು ಎಂದು ತಿಳಿಸಿದರು.

ಮೂಡುಗಿಳಿಯಾರು ಸರ್ಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಕೆಲವು ವ್ಯಕ್ತಿಗಳಿಂದ ಅನಾಗರಿಕ ಚಟುವಟಿಕೆ ನಡೆಯುತ್ತಿದೆ. ಆ ಪ್ರದೇಶದಲ್ಲಿ ಸೋಲಾರ್ ಲೈಟ್ ಅಳವಡಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು. ಕೋಟ ಪಡುಕರೆ ಸಂಯುಕ್ತ ಪ್ರೌಢಶಾಲೆಯ ಶೌಚಾಲಯ ನಿರ್ವಹಣೆಗೆ ಪಂಚಾಯಿತಿಯಿಂದ ಸಿಬ್ಬಂದಿ ನೇಮಕಗೊಳಿಸಲು ವಿದ್ಯಾರ್ಥಿ ಮೈತ್ರಿ ಗಮನಕ್ಕೆ ತಂದರು. ಶಾಲೆಯಲ್ಲಿ ಸ್ಯಾನಿಟರ್ ಪ್ಯಾಡ್ ನಿಷ್ಕ್ರಿಯಗೊಳಿಸುವ ಯಂತ್ರ ಅಳವಡಿಸಲು ಮೂಡುಗಿಳಿಯಾರು ಶಾಲೆ ವಿದ್ಯಾರ್ಥಿ ಸಾನ್ವಿ ಬೇಡಿಕೆಯಿತ್ತರು.

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಕ್ರಮ ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಚಾಯಿತಿ ಅಧಿಕಾರಿಗಳು ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗೆ ಶಾಲೆ ಮತ್ತು ಪಂಚಾಯಿತಿ ಒಗ್ಗೂಡಿ ಪತ್ರ ಬರೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.

18 ಸಾಧಕ ವಿದ್ಯಾರ್ಥಿಗಳಿಗೆ ಗೌರವ ಸಹಾಯಧನ ವಿತರಿಸಲಾಯಿತು. ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ತಿಲೋತ್ತಮೆ ಮಕ್ಕಳು ಮತ್ತು ಮಹಿಳೆಯರ ಹಕ್ಕು, ಆರೋಗ್ಯ, ಆಹಾರ ಕ್ರಮ, ಕೋಟ ಎಎಸ್ಐ ಗೋಪಾಲ ಪೂಜಾರಿ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.

ಆರೋಗ್ಯ ಇಲಾಖೆಯ ದೇವಪ್ಪ ಪಟಗಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಲಕ್ಷ್ಮೀ, ಗ್ರಾಮಸಭೆಯ ನೋಡಲ್ ಅಧಿಕಾರಿ ಕೋಟ ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್, ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರು ಭಾಗವಹಿಸಿದ್ದರು. ಪಿಡಿಒ ಸುರೇಶ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಮಿಥುನ್ ವರದಿ ವಾಚಿಸಿದರು. ಕಾರ್ಯದರ್ಶಿ ಶೇಖರ ಮರವಂತೆ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.