ಕೋಟ (ಬ್ರಹ್ಮಾವರ): ಇಂದು ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಅವಲೋಕಿಸಿದರೆ ಬಹಳ ಬೇಸರವಾಗುತ್ತದೆ. ಶತಮಾನ ಕಂಡ ಅದೆಷ್ಟೋ ಶಾಲೆಗಳ ಉಳಿವಿಗಾಗಿ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು ಸಂತಸ ನೀಡುತ್ತದೆ ಎಂದು ಮಣಿಪಾಲ ಮಾಹೆ ಸಹಕುಲಪತಿ ಡಾ.ಎಚ್.ಎಸ್. ಬಲ್ಲಾಳ್ ಹೇಳಿದರು.

ಇಲ್ಲಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಪರಿಸರದ ಶಾಲೆಗಳನ್ನು ಗ್ರಾಮಸ್ಥರು, ಹಳೆ ವಿದ್ಯಾರ್ಥಿ ಸಂಘದ ಸಹಕಾರ ಪಡೆದು ಅಭಿವೃದ್ಧಿಗೊಳಿಸಬೇಕು. ನಾವೆಲ್ಲರೂ ಒಟ್ಟಾಗಿ ಕೈಜೋಡಿಸಿ ಶಾಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತು ಪ್ರಸ್ತುತ ಇರುವ ಶಿಕ್ಷಕರು, ಗೌರವ ಶಿಕ್ಷಕರನ್ನು ಗೌರವಿಸಲಾಯಿತು. ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿ ಸಂಚಾಲಕ ಸಚಿನ್ ಕಾರಂತ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಣೂರು ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್, ಉದ್ಯಮಿ ಸುರೇಶ ಪ್ರಭು, ರಮಾನಂದ ಶ್ಯಾನುಭಾಗ್, ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ರವೀಂದ್ರ ಜೋಗಿ ಭಾಗವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾನಂದ ಗಿಳಿಯಾರು ಶತಮಾನೋತ್ಸವದ ವರದಿ ಸಲ್ಲಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಕೆ. ರಾಜಾರಾಂ ಐತಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ದಿವಾಕರ ರಾವ್ ಸ್ವಾಗತಿಸಿದರು. ಅತಿಥಿ ಶಿಕ್ಷಕರಾದ ವಿನೋದ ವಿಜಯ, ಸರಿತಾ ಪ್ರಸಾದ್ ನಿರೂಪಿಸಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.