ಬ್ರಹ್ಮಾವರ: ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯದವರು ಉದ್ಯೋಗ ಅರಸಿ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಯುವ ಆಸಕ್ತರಿಗೆ ಚೈತನ್ಯ ತುಂಬುವ ಉದ್ಯೋಗ ಮೇಳವನ್ನು ಕೋಟ ಪಡುಕರೆ ಕಾಲೇಜು ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು.

ಕೋಟ ಪಡುಕರೆ ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಣೂರು ಗೀತಾನಂದ ಫೌಂಡೇಶನ್ ಸಹಯೋಗದಲ್ಲಿ ಆಯೋ ಜಿಸಿದ್ದ ‘ಉದ್ಯೋಗ ಮೇಳ - 2026’ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ್ ಮಾತನಾಡಿ, ಯುವ ಜನತೆಗೆ ಶೈಕ್ಷಣಿಕ ವ್ಯವಸ್ಥೆಯ ನಡುವೆ ಉದ್ಯೋಗ ಎಂಬುದು ಪ್ರಮುಖ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗ ಮೇಳವು ಒಂದು ಸುವರ್ಣಾ ವಕಾಶ ಕಲ್ಪಿಸಿದೆ ಎಂದರು.

ಉದ್ಯೋಗ ಮೇಳದಲ್ಲಿ ರಾಜ್ಯದ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, ಯುವ ಅಭ್ಯರ್ಥಿಗಳನ್ನು ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಂಡವು. ಗ್ರಾಮೀಣ ಭಾಗದ ನೂರಾರು ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಂಡರು.

ಕಾಲೇಜಿನ ಐಕ್ಯುಎಸಿ ವಿಭಾಗದ ಸುಬ್ರಹ್ಮಣ್ಯ ಎ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ ಹಾಗೂ ವಿದ್ಯಾರ್ಥಿ ಪ್ಲೇಸ್ಮೆಂಟ್ ಸೆಲ್ನ ಸಂಯೋಜಕ ಪ್ರೀತಿಕಾ ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕ ರಾಮ ಚಂದ್ರ ಭಟ್ ಸ್ವಾಗತಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-1464038234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.