ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಉಡುಪಿಯಲ್ಲಿ ಒಂದೇ ದಿನ 16 ಶಂಕಿತರು ದಾಖಲು

Last Updated 22 ಮಾರ್ಚ್ 2020, 15:12 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಶಂಕಿತ ಕೊರೊನಾ ಸೋಂಕಿತರ ಪ್ರಕರಣದಲ್ಲಿ ದಿಢೀರ್ ಏರಿಕೆಯಾಗಿದ್ದು, ಒಂದೇ ದಿನ 16 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿನ ಶಂಕಿತರು ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ಮೂಡಿಸಿದೆ.

ಜಪಾನ್‌, ಸೌದಿ ಅರೇಬಿಯಾ, ಸಿಂಗಪುರ, ಮಸ್ಕತ್, ಅಬುದಾಬಿ, ಮುಂಭೈ, ತೆಲಂಗಾಣದಿಂದ ಈಚೆಗೆ ಜಿಲ್ಲೆಗೆ ಮರಳಿದ್ದ 10 ಹಾಗೂ ಸ್ಥಳೀಯರಾದ 6 ಜನರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಂಕಿತರಲ್ಲಿ 11 ಪುರುಷರು ಹಾಗೂ ಐವರು ಮಹಿಳೆಯರು ಸೇರಿದ್ದು ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 26 ಜನರ ವೈದ್ಯಕೀಯ ಪರೀಕ್ಷಾ ವರದಿ ಬರಬೇಕಿದೆ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT