ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ದರ್ಶನ ಪಡೆದ ಡಿ.ಕೆ.ಶಿವಕುಮಾರ್

Last Updated 14 ಸೆಪ್ಟೆಂಬರ್ 2021, 10:08 IST
ಅಕ್ಷರ ಗಾತ್ರ

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಉಡುಪಿಯ ಕಾಂಗ್ರೆಸ್‌ ಕಚೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿ, ಆಸ್ಕರ್ ಅವರೊಂದಿಗೆ ನಾಲ್ಕು ದಶಕಗಳ ರಾಜಕೀಯ ಒಡನಾಟವಿತ್ತು. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದ ಆಸ್ಕರ್ ಕೇಂದ್ರ ಹೆದ್ದಾರಿ ಸಚಿವರಾಗಿದ್ದಾಗ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ‌ ಮೇಲ್ದರ್ಜೆಗೇರಿಸಿದರು. ಕಾರ್ಮಿಕ ಸಚಿವರಾಗಿದ್ದಾಗ ಇಎಸ್‌ಐ ಆಸ್ಪತ್ರೆಗಳನ್ನು ಮೆಡಿಕಲ್ ಕಾಲೇಜುಗಳಾಗಿ ಬದಲಾಯಿಸಿ, ಕಾರ್ಮಿಕರ ಮಕ್ಕಳು ಉಚಿತವಾಗಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಮಾಡಿಕೊಟ್ಟರು. ಕಾರ್ಮಿಕ ಇಲಾಖೆಗೆ ಬಲ ತುಂಬುವುದರ ಜತೆಗೆ ಅಗತ್ಯ ಮೂಲಸೌಕರ್ಯ ಒದಗಿಸಿದರು. ಕರಾವಳಿಯಲ್ಲಿ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಅವರ ಕೊಡುಗೆ ದೊಡ್ಡದು ಎಂದರು.

ಕಾಂಗ್ರೆಸ್‌ನಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸಿದ್ದ ಆಸ್ಕರ್ ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದರು.

ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT