ಉಡುಪಿ: ಸರಳ ಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಸೆ.11ರಂದು ಕೃಷ್ಣ ಜನ್ಮಾಷ್ಟಮಿ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.
ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ, ಪ್ರತಿವರ್ಷ ನಡೆಯುತ್ತಿದ್ದ ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.
ಕೃಷ್ಣ ಲೀಲೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಯಾದ ಮೊಸರು ಕುಡಿಕೆ ಒಡೆಯುವ ಆಚರಣೆ ಈ ಬಾರಿಯೂ ನಡೆಯುತ್ತಿದ್ದು, ರಥಬೀದಿಯ ಹಲವೆಡೆ ಗುರ್ಜಿಗಳನ್ನು ಸಿದ್ಧಪಡಿಸಲಾಗಿದೆ. ಉತ್ಸವದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.
ಪ್ರತಿವರ್ಷ ಉಡುಪಿಯ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿತ್ತು. ಹೊರ ಜಿಲ್ಲೆ, ರಾಜ್ಯ, ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ ಕೃಷ್ಣನ ಲೀಲೋತ್ಸವಗಳನ್ನು ಕಣ್ತುಂಬಿಕೊಳ್ಳುತ್ತಿದ್ದರು.
ಹುಲಿವೇಷ, ಸಾಂಸ್ಕತಿಕ ಕಾರ್ಯಕ್ರಮಗಳು, ವೇಷಧಾರಿಗಳು ಉತ್ಸವದ ಅಂದವನ್ನು ಹೆಚ್ಚಿಸುತ್ತಿದ್ದರು. ಈ ವರ್ಷ ಕೊರೊನಾದಿಂದ ಉತ್ಸವ ಕಳೆಗುಂದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.