ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣನ ದರ್ಶನ ಪಡೆದ ರವಿಶಾಸ್ತ್ರಿ

Published 14 ಮೇ 2024, 20:04 IST
Last Updated 14 ಮೇ 2024, 20:04 IST
ಅಕ್ಷರ ಗಾತ್ರ

ಉಡುಪಿ: ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಮಂಗಳವಾರ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀ ಹಾಗೂ ಕಿರಿಯ ಯತಿ ಸುಶ್ರೀಂದ್ರ ತೀರ್ಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭ ಪರ್ಯಾಯ ಶ್ರೀಗಳ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತಪಡಿಸಿದ ರವಿಶಾಸ್ತ್ರೀ, ಕೃಷ್ಣ ಭಕ್ತರು ಸ್ವಯಂಸ್ಫೂರ್ತಿಯಿಂದ ಗೀತಾ ಲೇಖನ ಯಜ್ಞ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಸುಗುಣೇಂದ್ರ ತೀರ್ಥ ಶ್ರೀಗಳು ಮಾತನಾಡಿ, ಉಡುಪಿಯ ಬಾಲಕೃಷ್ಣನಿಗೆ ನೂರನೇ ಅಲಂಕಾರ ನಡೆದಿದ್ದು ಈ ಸಂದರ್ಭದಲ್ಲಿ ಖ್ಯಾತ ಕ್ರಿಕೆಟಿಗ ರವಿಶಾಸ್ತ್ರೀ ದೇವರ ದರ್ಶನ ಪಡೆದಿರುವುದು ಯೋಗಾಯೋಗ ಎಂದರು.

ಈ ಸಂದರ್ಭ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT