ಉಡುಪಿ: ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಬುಧವಾರ ಸಂಭ್ರಮದ ಮೂರು ತೇರು ಉತ್ಸವ ನಡೆಯಿತು.

ಆಚಾರ್ಯಮಧ್ವರು ಮಕರ ಸಂಕ್ರಮಣದಂದು ಶ್ರೀಕೃಷ್ಣನ ಪ್ರತಿಷ್ಠಾಪನೆ ನಡೆಸಿದರು ಎಂಬ ಐತಿಹ್ಯವಿದ್ದು, ಕೃಷ್ಣ ಮಠದಲ್ಲಿ ಬೆಳಗ್ಗಿನಿಂದಲೇ ಮಹಾಭಿಷೇಕ ಸಹಿತ ವಿಶೇಷ ಪೂಜೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು.

ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿದ್ದರು. ಭಾವಿ ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಮುಹೂರ್ತ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿದೇಶದಿಂದ ಬಂದಿದ್ದ ಭಕ್ತಿಭೃಂಗ ಶ್ರೀಗೋವಿಂದ ಸ್ವಾಮಿ ಮಹಾರಾಜ್ ಅವರು ರಥೋತ್ಸವದಲ್ಲಿ ಭಾಗಿಯಾದರು. ಅವರು ಕಜಕಿಸ್ತಾನ ಮುಂತಾದ ರಾಷ್ಟ್ರಗಳಲ್ಲಿ ಕೃಷ್ಣ ಭಕ್ತಿ ಪ್ರಚಾರ ಮಾಡುತ್ತಿದ್ದಾರೆ.

ಇಂದು ಚೂರ್ಣೋತ್ಸವ: ಇದೇ 15ರಂದು ಬೆಳಿಗ್ಗೆ 9ರಿಂದ ರಥಬೀದಿಯಲ್ಲಿ ಚೂರ್ಣೋತ್ಸವ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.