ಮಂಗಳವಾರ, ಡಿಸೆಂಬರ್ 1, 2020
26 °C

ಕೃಷ್ಣಮಠ: ದೇವರ ದರ್ಶನ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಶ್ರೀಕೃಷ್ಣಮಠದಲ್ಲಿ ದೇವರ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದ್ದು, ನ.4ರಿಂದ ಬೆಳಿಗ್ಗೆ 8.30ರಿಂದ 10ರವರೆಗೆ, ಮಧ್ಯಾಹ್ನ 2ರಿಂದ 6ರವರೆಗೆ ದೇವರ ದರ್ಶನ ಪಡೆಯಬಹುದು ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಮಾರ್ಚ್ 22ರಿಂದ ಸೆ.27ರವರೆಗೆ ಕೃಷ್ಣಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧವಿತ್ತು. ಲಾಕ್‌ಡೌನ್‌ ಸಡಿಲಿಕೆಯ ಬಳಿಕ ಸೀಮಿತ ಅವಧಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿದಿನ ಮಧ್ಯಾಹ್ನ 2ರಿಂದ ಸಂಜೆ 5ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿತ್ತು. ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದರ್ಶನ ಸಮಯದಲ್ಲಿ ಮಾರ್ಪಾಡು ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.