ಭಾನುವಾರ, ಆಗಸ್ಟ್ 1, 2021
27 °C
ದಾಸರ ಪದಕ್ಕೆ ಹೆಜ್ಜೆಹಾಕಿದ ಶ್ರೀಗಳು

ಡಂಗುರಾವ ಸಾರಿ ಹರಿಯ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ’ ದಾಸರಪದಕ್ಕೆ ನೃತ್ಯ ಮಾಡಿದರು.

ಕೃಷ್ಣ ದೇವರಿಗೆ ರಾತ್ರಿ ಪೂಜೆಯ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆಯಿತು. ಬಳಿಕ ದೇವರ ಎದುರಿಗಿರು ಮಂಟಪದಲ್ಲಿ ಸ್ವಾಮೀಜಿ ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡಿದರು.

ಹರಿವಾಣ ಸೇವೆ ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು