ಉಡುಪಿ: ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರೆ ಡ್ಯಾಂ ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ನೀರಾವರಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಚಿವರು, ಕೆಆರ್‌ಎಸ್ ಅಣೆಕಟ್ಟೆ ಬಿರುಕು ವಿಚಾರವಾಗಿ ಮಂಡ್ಯ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ರಾಜಕೀಯ ನಾಯಕರಿಗೆ ಇದು ಶೋಭೆ ತರುವಂಥದಲ್ಲ ಎಂದರು.
ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ದೇಶದ ಸೈನಿಕರ ಕುರಿತು ಮಾಡಿದ ಅವಹೇಳನಕಾರಿ ಟ್ವೀಟ್‌ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಖಂಡನೆ ವ್ಯಕ್ತವಾಗಬೇಕಿತ್ತು. ಬದಲಾಗಿ, ಆರೋಪಿ ವಿರುದ್ಧ ಕ್ರಮ ಜರುಗಿಸಿ ಪೊಲೀಸರ ವಿರುದ್ಧವೇ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಲಿಂಬಾವಳಿ ಹೇಳಿದರು.
ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಕೈಬಿಡಬಹುದಾದ ಅರಣ್ಯ ಪ್ರದೇಶದ ಮಾಹಿತಿಯನ್ನು ವಿಧಾನಸಭಾವಾರು ತರಿಸಿಕೊಳ್ಳಲಾಗುವುದು. ರಾಜ್ಯದಲ್ಲಿರುವ ಕುಮ್ಕಿ ಹಾಗೂ ಬಾಣ ಜಮೀನು ಹಂಚಿಕೆ ಸಂಬಂಧ ರಾಜ್ಯಮಟ್ಟದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.