ಶನಿವಾರ, ಮೇ 15, 2021
24 °C

ಉಡುಪಿಯಿಂದ ಹೊರಟ 7 ಸಾರಿಗೆ ಬಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಶುಕ್ರವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ 7 ಬಸ್‌ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊರಟವು.

ಬೆಳಿಗ್ಗೆ 8.15, ಮಧ್ಯಾಹ್ನ 12ಕ್ಕೆ ಹಾಗೂ ರಾತ್ರಿ 7.30ಕ್ಕೆ ಕಾರ್ಕಳಕ್ಕೆ ಮೂರು ಬಸ್‌, ಬೆಳಿಗ್ಗೆ 8ಕ್ಕೆ ಹಾಗೂ ರಾತ್ರಿ 9.30ಕ್ಕೆ ಮೈಸೂರು ಮಾರ್ಗವಾಗಿ ಎರಡು ಬಸ್‌, ಸಂಜೆ 6 ಗಂಟೆಗೆ ಹುಬ್ಬಳ್ಳಿ ಮಾರ್ಗದಲ್ಲಿ ಒಂದು ಬಸ್‌ ಹಾಗೂ ರಾತ್ರಿ 8ಕ್ಕೆ ಬೆಂಗಳೂರಿಗೆ ವೋಲ್ವೊ ತೆರಳಿದೆ ಎಂದು ನಿಲ್ದಾಣದ ಸಿಬ್ಬಂದಿ ಮಾಹಿತಿ ನೀಡಿದರು.

ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಶುಕ್ರವಾರ ಬಸ್‌ಗಳ ಸಂಖ್ಯೆ ಹೆಚ್ಚಾಗಿರುವುದು ಕಂಡುಬಂತು. ಜತೆಗೆ ಖಾಸಗಿ ಬಸ್‌ಗಳ ಸಂಚಾರವೂ ಎಂದಿನಂತಿತ್ತು. ಪ್ರಯಾಣಿಕರಿಗೆ ಮುಷ್ಕರದ ಬಿಸಿ ಹೆಚ್ಚು ತಟ್ಟಲಿಲ್ಲ.

ರಾತ್ರಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬಂತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು