ಹಿರಿಯಡಕ: ಕಾಂಗ್ರೆಸ್ ಮುಖಂಡನ ಮನೆಗೆ ಕಿಡಿಗೇಡಿಗಳು ಬಾಟಲಿ ಎಸೆದು ಹಾನಿಗೊಳಿಸಿದ ಘಟನೆ ಹಿರಿಯಡಕ ಸಮೀಪದ ಕುಕ್ಕೆಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಎಂಬುವವರ ಮನೆಗೆ ಕಿಡಿಗೇಡಿಗಳು ಬಾಟಲಿ ಎಸೆದು ಹಾನಿಗೊಳಿಸಿದ್ದಾರೆ. ಯಾವುದೋ ರಾಜಕೀಯ ಉದ್ದೇಶದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು ಈ ಬಗ್ಗೆ ದಿಲೀಪ್ ಹೆಗ್ಡೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಂಧನಕ್ಕೆ ಒತ್ತಾಯ: ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ವಿನಯ್ ಕುಮಾರ್ ಸೊರಕೆ, ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಕುಕ್ಕೆಹಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಶೆಟ್ಟಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.