ಅಧ್ಯಯನ ಪೀಠ ಸ್ಥಾಪನೆಗಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದರು. ಅಧ್ಯಯನ ಪೀಠದ ಕಾರ್ಯ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ₹1 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ₹50 ಲಕ್ಷ ಅನುದಾನ ಬಿಡುಗಡೆ ಮಾಡಲು ಆದೇಶಿಸಿದ್ದರು.