ಕುಂದಾಪುರ: ಪರಿಸರದ ವಿದ್ಯಾರ್ಥಿಗಳಿಗೆ ಮೌಲಿಕ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ 1975ರಲ್ಲಿ ಜಿ.ಕೆ.ಮೇಲಿನಮನೆ, ಕುಸುಮ ಮೇಲಿನಮನೆ ದಂಪತಿ ಆರಂಭಿಸಿದ ಕುಂದಾಪುರ ಎಜುಕೇಷನ್ ಸೊಸೈಟಿ ಹಾಗೂ ಎಚ್ಎಂಎಂ ಇಂಗ್ಲಿಷ್ ಮಾಧ್ಯಮ ಶಾಲೆಗೆ 50 ವರ್ಷ ತುಂಬಿದ್ದು, ಡಿ. 18ರಿಂದ 24ರವರೆಗೆ ಸುವರ್ಣ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾಹಿತಿ ನೀಡಿದ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಸಂಸ್ಥೆಯು ಉಡುಪಿ ಜಿಲ್ಲೆಯ ಮೊದಲ ಇಂಗ್ಲಿಷ್ ಮಾಧ್ಯಮ ಶಾಲೆ ಎನ್ನುವ ಗರಿಮೆ ಹೊಂದಿದೆ. ಸುವರ್ಣ ಮಹೋತ್ಸವವ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮಂತ್ರಾಲಯ ಶ್ರೀಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವರು ಎಂದರು.

ಮಾಡರ್ನ್ ಸ್ಕೂಲ್ ಎಂಬ ಹೆಸರಿನಲ್ಲಿ, 12 ಮಕ್ಕಳೊಂದಿಗೆ ಆರಂಭವಾದ ಸಂಸ್ಥೆ ಸಮೂಹ ಶಿಕ್ಷಣ ಸಂಸ್ಥೆಯಾಗಿ ಬೆಳೆದಿದ್ದು, ಕುಂದಾಪುರ ಎಜುಕೇಶನ್ ಸೊಸೈಟಿ ಅಧೀನದಲ್ಲಿ ಪ್ರಸ್ತುತ ವಿಕಆರ್ ಶಾಲೆ, ಆರ್.ಎನ್.ಶೆಟ್ಟಿ ಪಿಯು ಕಾಲೇಜು, ಡಾ.ಬಿ.ಬಿ.ಹೆಗ್ಡೆ ಪದವಿ ಕಾಲೇಜುಗಳಿದ್ದು, ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ನಾನು ಅಧ್ಯಕ್ಷನಾದ ಬಳಿಕ, ಪಿಯು, ಪದವಿ ಕಾಲೇಜನ್ನು ಆರಂಭಿಸಲಾಗಿದೆ. ಗುಣಮಟ್ಟದ ಶಿಕ್ಷಣದ ಮೂಲಕ ಉತ್ತಮ ಫಲಿತಾಂಶ ಪಡೆದುಕೊಳ್ಳುತ್ತಿದೆ ಎಂದರು.

ವಾರ್ಷಿಕ ₹60 ಲಕ್ಷಗಳಷ್ಟು ಶುಲ್ಕ ವಿನಾಯಿತಿ ಮಾಡಲಾಗುತ್ತದೆ. 500 ವಿದ್ಯಾರ್ಥಿಗಳಿಗೆ ಉಚಿತವಾಗಿ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಪ್ರೌಢಶಾಲೆ ವಿಭಾಗದಲ್ಲಿ ಈ ವರ್ಷ ಎಸ್ಎಸ್ಎಲ್ಸಿಯಲ್ಲಿ 9 ರ್ಯಾಂಕ್ ಬಂದಿದೆ. ಪಿಯು ಕಾಲೇಜಿನಲ್ಲಿ ಸಿಇಟಿಯಲ್ಲಿ ಉತ್ತಮ ಸಾಧನೆ, ಪದವಿಯಲ್ಲಿ ರ್ಯಾಂಕ್, ಕ್ರೀಡೆ ಸೇರಿದಂತೆ ಅನೇಕ ಸಾಧನೆಗಳನ್ನು ಸಂಸ್ಥೆ ಮಾಡುತ್ತಿದೆ. 4 ಜಿಲ್ಲೆಯ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಬರುತ್ತಾರೆ ಎಂದರು.

18ರಂದು 2 ಸಾವಿರ ವಿದ್ಯಾರ್ಥಿಗಳಿಂದ ಪುರ ಮೆರವಣಿಗೆ ನಡೆಯಲಿದ್ದು, ಉಪ ವಿಭಾಗಾಧಿಕಾರಿ ರಶ್ಮೀ ಎಸ್.ಆರ್. ಉದ್ಘಾಟಿಸುವರು. ಅಂದು ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ವಾರ್ಷಿಕೋತ್ಸವ ನಡೆಯಲಿದೆ. 19ರಂದು ಎಚ್ಎಂಎಂ ಶಾಲೆ ವಾರ್ಷಿಕೋತ್ಸವ ನಡೆಯಲಿದೆ. 20ರಂದು ವಿಕೆಆರ್ ಶಾಲೆಯ ವಾರ್ಷಿಕೋತ್ಸವ ನಡೆಯಲಿದೆ. ಮಂತ್ರಾಲಯ ಮಠದ ಸುಬುಧೇಂದ್ರತೀರ್ಥ ಸ್ವಾಮೀಜಿ ಸುವರ್ಣಸೌಧ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಟಿ.ಡಿ. ರಾಜೇಗೌಡ ಭಾಗವಹಿಸುವರು. 21ರಂದು ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, 22ರಂದು ಹೊಸದಿಗಂತ ಸಿಇಒ ಪಿ.ಎಸ್. ಪ್ರಕಾಶ್, ಎಸ್ಪಿ ಹರಿರಾಮ್ ಶಂಕರ್ ಭಾಗವಹಿಸುವರು. 23ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಭಾಗವಹಿಸುವರು ಎಂದು ತಿಳಿಸಿದರು.

ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಪದವಿ ಕಾಲೇಜು ಪ್ರಾಂಶುಪಾಲ ಉಮೇಶ್ ಶೆಟ್ಟಿ ಕೆ, ಪಿಯು ಕಾಲೇಜು ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಎಚ್ಎಂಎಂ ವಿಕೆಆರ್ ಶಾಲೆಗಳ ಪ್ರಾಂಶುಪಾಲೆ ಚಿಂತನಾ ರಾಜೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.