ಕುಂದಾಪುರ: ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂಬ ಮಹದಾಸೆ ಹೊಂದಿದ್ದ ಯಡ್ತರೆ ಮಂಜಯ್ಯ ಶೆಟ್ಟಿ ಅವರು ಶಾಸಕರಾಗಿದ್ದಾಗ ಆರಂಭವಾಗಿದ್ದ ವಂಡ್ಸೆಯ ಮಲ್ನಾಡ್ ಹೈಸ್ಕೂಲ್ ಶಿಕ್ಷಣಾಸಕ್ತ ಮನಸ್ಸುಗಳಿಗೆ ದೇವಾಲಯ ಎಂದು ಬಸ್ರೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಬಣ್ಣಿಸಿದರು.

ಇಲ್ಲಿಗೆ ಸಮೀಪದ ವಂಡ್ಸೆ– ನೆಂಪುವಿನ ಕೆಪಿಎಸ್ ಸ್ಕೂಲ್ ಆವರಣದಲ್ಲಿ ₹1.25 ಕೋಟಿ ವೆಚ್ಚದಲ್ಲಿ ದಾನಿಗಳು, ಹಳೆ ವಿದ್ಯಾರ್ಥಿಗಳು ನಿರ್ಮಿಸಿಕೊಟ್ಟ ಹೊಳ್ಮಗೆ ವಿನೋದಾ ರವಿ ಶೆಟ್ಟಿ ಸಾಂಸ್ಕೃತಿಕ ರಂಗ ‘ಐಕ್ಯಂ’ ಲೋಕಾರ್ಪಣೆ, ಮಾಜಿ ಶಾಸಕ ಯಡ್ತರೆ ಮಂಜಯ್ಯ ಶೆಟ್ಟಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಅವಶ್ಯಕತೆಗೆ ಅನುಗುಣವಾಗಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಬೆಳವಣಿಗೆಗೆ ಸರ್ಕಾರ ಇಚ್ಛಾಶಕ್ತಿ ತೋರಬೇಕು. ಅಧ್ಯಾಪಕರ ಕೊರತೆ, ಮೂಲಸೌಕರ್ಯ ಕೊರತೆ ನೀಗಿಸಲು ಆದ್ಯತೆ ನೀಡಬೇಕು. ಸಮಾಜದ ಬೆಳವಣಿಗೆಯಲ್ಲಿ ಮುಖ್ಯ ಪಾತ್ರ ವಹಿಸುವ ಶಿಕ್ಷಣ ಸಂಸ್ಥೆಗಳ ಕೊಡುಗೆಯನ್ನು ಸಮಾಜ ಮರೆಯಬಾರದು. ಬೈಂದೂರು ವಿಧಾನಸಭಾ ಕ್ಷೇತ್ರ ನಿರೀಕ್ಷೆಯಂತೆ ಅಭಿವೃದ್ಧಿಯಾಗದೆ ಇರುವುದರ ಬಗ್ಗೆ ಬೇಸರವಿದೆ ಎಂದರು.

ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಪತ್ನಿ ಕಲಿತ ಶಾಲೆಯ ಅಭ್ಯುದಯಕ್ಕಾಗಿ ₹75 ಲಕ್ಷದ ಕೊಡುಗೆ ನೀಡಿ, ಪತ್ನಿಯ ಹೆಸರನ್ನು ಶಾಶ್ವತವಾಗಿಸುವ ಜೊತೆ ಸಮಾಜದ ಋಣ ತೀರಿಸುವ ಡಾ.ರವೀಂದ್ರನಾಥ ಶೆಟ್ಟಿ ಅವರ ಕೊಡುಗೆ ಅನನ್ಯ. ಸಮರ್ಥ ನಾಯಕತ್ವ ಇದ್ದರೆ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತವೆ ಎನ್ನುವುದಕ್ಕೆ ಬಿ.ಎನ್.ಶೆಟ್ಟಿ ಉದಾಹರಣೆ. ಹುಟ್ಟೂರು, ವಿದ್ಯೆ ನೀಡಿದ ಶಾಲೆ, ಭಾವನೆ ಬೆಸೆದ ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನ ನಮ್ಮ ಜವಾಬ್ದಾರಿ ಎಂದು ಭಾವಿಸಿ ಸ್ಪಂದಿಸುತ್ತಿರುವ ಬಗ್ವಾಡಿ ಕುಟುಂಬಸ್ಥರು, ಹಳೆವಿದ್ಯಾರ್ಥಿಗಳು ಸ್ಮರಣೀಯರು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಬಿ.ಎನ್.ಶೆಟ್ಟಿ, ಸರ್ಕಾರಿ ಶಾಲೆಗಳ ಅಭಿವೃಧ್ಧಿಗೆ ಹಳೆವಿದ್ಯಾರ್ಥಿಗಳು ಮುಂದಾದಾಗ ಸರ್ಕಾರದ ಹೊರೆ ಕಡಿಮೆಯಾಗುತ್ತದೆ ಜೊತೆಗೆ ಊರು ಅಭಿವೃದ್ಧಿಯಾಗುತ್ತದೆ ಎನ್ನುವ ದಿಸೆಯಲ್ಲಿ ಈ ಯೋಜನೆ ರೂಪಿಸಿಕೊಳ್ಳಲಾಯಿತು ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡ ಕೆ. ಗೋಪಾಲ ಪೂಜಾರಿ, ಕರ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೀವ ಶೆಟ್ಟಿ ಬಿಜ್ರಿ, ಕುಂದಾಪುರ ರೆಡ್ಕ್ರಾಸ್ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ, ಉದ್ಯಮಿ ಅಶೋಕ್ ಕುಮಾರ್ ಶೆಟ್ಟಿ ಕುಂದಾಪುರ, ಬೈಂದೂರು ವಲಯ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಪ್ರಾಂಶುಪಾಲ ಕೃಷ್ಣರಾಜ್ ಭಟ್, ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೆ. ನಾರಾಯಣ ಶೆಟ್ಟಿ, ಅಧ್ಯಕ್ಷ ಎನ್. ಸಂತೋಷ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಚಿತ್ತೂರು ಸ್ವಾಗತಿಸಿದರು. ಶಿಕ್ಷಕ ವಸಂತ್ರಾಜ್ ಶೆಟ್ಟಿ ವಂಡ್ಸೆ ಸನ್ಮಾನ ಪತ್ರ ವಾಚಿಸಿದರು. ಡಾ.ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿದರು. ಮುಖ್ಯಶಿಕ್ಷಕ ಶ್ರೀಧರ ಭಟ್ ವಂದಿಸಿದರು.

Highlights - null

Quote -

Cut-off box - ಸನ್ಮಾನ ಕಟ್ಟಡ ನಿರ್ಮಾಣಕ್ಕೆ ಕೊಡುಗೆ ನೀಡಿದ ಡಾ.ರವೀಂದ್ರನಾಥ ಶೆಟ್ಟಿ ಹಳ್ನಾಡು ಮತ್ತು ಗೀತಾ ಆರ್. ಶೆಟ್ಟಿ ಬಿ.ಎನ್.ಶೆಟ್ಟಿ ಮತ್ತು ಶೋಭಾ ಬಿ.ಎನ್. ಶೆಟ್ಟಿ ಪುತ್ಥಳಿ ನಿರ್ಮಾಣ ಮಾಡಿದ ಶಿಲ್ಪಿ ಪ್ರಶಾಂತ್ ಉಪ್ಪುಂದ ಇತರ ದಾನಿಗಳನ್ನು ದಂಪತಿ ಸಹಿತವಾಗಿ ಗೌರವಿಸಲಾಯಿತು. ಗಜದ್ವಾರ ಉದ್ಘಾಟನೆ ಮಾಜಿ ಶಾಸಕ ಯಡ್ತರೆ ಮಂಜಯ್ಯ ಶೆಟ್ಟಿ ಪುತ್ಥಳಿ ಅನಾವರಣ ಹಳೆವಿದ್ಯಾರ್ಥಿ ಸಂಘದ ಕಚೇರಿ ಉದ್ಘಾಟನೆ ಜ್ಞಾನ ಸಂಗಮ ಸಭಾಂಗಣ ಶೋಭಾ ಬಿ.ಎನ್.ಶೆಟ್ಟಿ ಬಗ್ವಾಡಿ ಯಕ್ಷರಂಗ ಸಭಾ ವೇದಿಕೆ ಉದ್ಘಾಟನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.