ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರ: ಭಕ್ತರ ದೇವರ ದರ್ಶನಕ್ಕೆ ಸಕಲ ಸಿದ್ಧತೆ

Last Updated 7 ಜೂನ್ 2020, 12:35 IST
ಅಕ್ಷರ ಗಾತ್ರ

ಕುಂದಾಪುರ: ಕೋವಿಡ್‌ ಸೋಂಕು ತಡೆಗೆ ಲಾಕ್‌ಡೌನ್‌ ಕಾರಣದಿಂದ ಬಾಗಿಲು ಮುಚ್ಚಿದ್ದ ತಾಲ್ಲೂಕಿನ ಪ್ರಮುಖ ದೇವಸ್ಥಾನಗಳು ಸೋಮವಾರದಿಂದ ಭಕ್ತರಿಗೆ ದೇವರ ದರ್ಶನ ನೀಡಲು ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.

ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನ, ಕುಂಭಾಸಿ ಆನೆಗುಡ್ಡೆಯ ಸಿದ್ಧಿವಿನಾಯಕ ದೇವಸ್ಥಾನ, ಕಮಲಶಿಲೆಯ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ, ಹಟ್ಟಿಯಂಗಡಿಯ ವಿನಾಯಕ ದೇವಸ್ಥಾನ, ಬಸ್ರೂರಿನ ಮಹಾಲಿಂಗೇಶ್ವರ ದೇವಸ್ಥಾನ, ಶಂಕರನಾರಾಯಣದ ಕ್ರೋಢ ಶಂಕರನಾರಾಯಣ ದೇವಸ್ಥಾನ, ಕುಂದಾಪುರದ ಕುಂದೇಶ್ವರ ದೇವಸ್ಥಾನ, ಆನಗಳ್ಳಿಯ ದತ್ತಾಶ್ರಮ ಸೇರಿದಂತೆ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕುಗಳ ಬಹುತೇಕ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನ ದೊರೆಯಲಿದೆ.

ದೇಗುಉಲ ತರೆಯುವ ದರ್ಶನ ವ್ಯವಸ್ಥೆಗಾಗಿ ಒಂದೆರಡು ದಿನಗಳಿಂದ ದೇಗುಲವನ್ನು ಸ್ವಚ್ಛಗೊಳಿಸುವ ಹಾಗೂ ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ , ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅರ್ಚಕರೊಂದಿಗೆ ಸರಣಿ ಸಭೆಯನ್ನು ನಡೆಸಿದ್ದಾರೆ. ಕೊಲ್ಲೂರು ಸೇರಿದಂತೆ ಒಂದೆರಡು ದೇವಸ್ಥಾನಗಳಲ್ಲಿ ಭಕ್ತರ ಪ್ರವೇಶ ಹಾಗೂ ದರ್ಶನದ ಕುರಿತು ಅಣ‌ಕು ಪ್ರವೇಶಗಳನ್ನು ಮಾಡಲಾಗಿದೆ.

ಕೊಲ್ಲೂರು, ಕುಂಭಾಸಿ, ಶಂಕರನಾರಾಯಣ ಮುಂತಾದ ದೇವಸ್ಥಾನಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ದೇಗುಲಗಳಲ್ಲಿ ತೀರ್ಥ ಹಾಗೂ ಪ್ರಸಾದ ನೀಡುವುದಿಲ್ಲ. ಕೆಲವುಕಡೆ ದೇಗುಲಗಳಲ್ಲಿ ಹಣ್ಣು ಕಾಯಿ, ಮಂಗಳಾರತಿ, ಕುಂಕುಮಾರ್ಚನೆಯಂತಹ ಸಣ್ಣ ಪುಟ್ಟ ಸೇವೆಗಳಿಗೆ ಅವಕಾಶ ನೀಡಿ, ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದೇಗುಲ ಪ್ರವೇಶಿಸುವ ಮೊದಲು ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲು ಭಕ್ತರಿಗೆ ಕಡ್ಡಾಯ ಸೂಚನೆಗಳನ್ನು ಹಾಕಲಾಗಿದೆ.

ಮಾರಣಕಟ್ಟೆ,15 ರಿಂದ ದರ್ಶನ: ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇದೇ 15 ರಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಜಾತ್ರೆ ಆಚರಣೆ: ಮಾರಣಕಟ್ಟೆ ಸಮೀಪದ ತೆಂಕೂರು ವನದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏಪ್ರಿಲ್‌ ತಿಂಗಳಲ್ಲಿ ನಡೆಯಬೇಕಾಗಿತ್ತು. ಲಾಕ್‌ಡೌನ್‌ ನಿರ್ಬಂಧದಿಂದ ನಡೆದಿರಲಿಲ್ಲ. ಭಾನುವಾರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಧಾರ್ಮಿಕ ಆಚರಣೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT