ಕುಂದಾಪುರ: ‘ರಾಜ್ಯದಲ್ಲಿ ಅಲ್ಪಾವಧಿ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರ, ಕೋಟ್ಯಂತರ ಬೆಲೆ ಬಾಳುವ ಆಸ್ತಿಗಳನ್ನು ಪರಭಾರೆ ಮಾಡಿರುವ ಇತಿಹಾಸವಿರುವಾಗ, ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಕೇವಲ 11 ಸೆಂಟ್ಸ್ ಜಾಗವನ್ನು ನೀಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲು ಬಿಜೆಪಿ ಮುಖಂಡರಿಗೆ ನೈತಿಕತೆ ಇರಬೇಕಲ್ಲವೇ’ ಎಂದು ರಾಜ್ಯ ಸಣ್ಣ ನೀರಾವರಿ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಪ್ರಶ್ನಿಸಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಬಳಿಯಲ್ಲಿ ನಿರ್ಮಾಣಗೊಳ್ಳಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ 100 ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಸ್ವಂತ ಕಚೇರಿ ಹೊಂದಬೇಕೆಂದು ಗುರಿ ನಿಗದಿಪಡಿಸಿದ್ದಾರೆ. ಜಾಗ ಹಾಗೂ ಕಟ್ಟಡ ನಿರ್ಮಾಣ ಕಾನೂನು ಪ್ರಕಾರವೇ ನಡೆಯುತ್ತದೆ. ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಪರವಾದ ಸರ್ಕಾರ ಬಂದಿರುವುದು ಬಿಜೆಪಿಗರ ನಿದ್ದೆಗೆಡಿಸಿದೆ. ವಿರೋಧ ಪಕ್ಷದ ಜನಪ್ರತಿನಿಧಿಗಳಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವ ಬದ್ಧತೆ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಇದೆ ಎಂದರು.

‘ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ದೊರಕಬೇಕಾದ ನ್ಯಾಯ ಕೇಳಲು ರಾಜ್ಯದ ಸಂಸದರು ಹಿಂದೇಟು ಹಾಕುತ್ತಿದ್ದಾರೆ. ಕ್ಷೇತ್ರಗಳ ಪುನರ್ ವಿಂಗಡಣೆ ಮೂಲಕ ದಕ್ಷಿಣದ ರಾಜ್ಯಗಳನ್ನು ಕಡೆಗಣಿಸಿ, ಉತ್ತರ ಭಾಗದಲ್ಲಿ ಸಂಖ್ಯೆ ಹೆಚ್ಚಿಸಿಕೊಳ್ಳುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ. 2013ರಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮಹಿಳಾ ಮೀಸಲಾತಿಗೆ ಅನುಮೋದನೆ ಪಡೆದುಕೊಂಡಿತ್ತು. ಚುನಾವಣೆಯವರೆಗೆ ಸಮೃದ್ಧ ಭಾರತ, ಚುನಾವಣೆ ಬಳಿಕ ನಿರ್ಬಂಧಿತ ಭಾರತ ಇದು ಪ್ರಧಾನಿ ಮೋದಿ ನೀತಿ. ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಸ್ಥಳೀಯಾಡಳಿತ ಚುನಾವಣೆಯನ್ನು ನಡೆಸಬೇಕು ಎನ್ನುವ ಗುರಿ ಸರ್ಕಾರಕ್ಕೆ ಇದೆ. ಎಷ್ಟೇ ಕಷ್ಟ ಬಂದರೂ ಗ್ಯಾರಂಟಿ ಯೋಜನೆಯನ್ನು ಮುಂದುವರಿಸುವ ಮೂಲಕ ಬದ್ಧತೆ ತೋರುತ್ತದೆ’ ಎಂದು ಹೇಳಿದರು.

ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ಮಾತನಾಡಿ, ‘ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಿಜೆಪಿಯೇ ಪುಕ್ಕಟೆ ಪ್ರಚಾರ ನೀಡಿದೆ. ಈ ಹಿಂದೆ ಪಕ್ಷಕ್ಕೆ ಉಚಿತವಾಗಿ ಕಚೇರಿ ನೀಡಿದ ಮಾಜಿ ಶಾಸಕ ಎಸ್.ಎಸ್. ಕೊಳ್ಕೆಬೈಲ್ ಮತ್ತು ಅವರ ಕುಟುಂಬದವರಿಗೆ ಕೃತಜ್ಞತೆ ಸಲ್ಲಿಸುವುದು ಆದ್ಯತೆಯಾಗಬೇಕು. ಜನರಿಗೆ ಸ್ಪಂದಿಸಿ, ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳುವವರೇ ನಿಜವಾದ ಜನನಾಯಕರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಬಹುತೇಕ ಚುನಾವಣೆಗಳಲ್ಲಿ ಪಕ್ಷದ ಬಗ್ಗೆ ಕೆಲಸ ಮಾಡಿರುವ ಹಿರಿಯ ಮುಖಂಡ ಕೆ.ಗೋಪಾಲ ಪೂಜಾರಿ ಅವರ ಕಡೆಗಣನೆ ಸರಿಯಲ್ಲ. ಪಕ್ಷ, ಸಂಘಟನೆಯಲ್ಲಿ ಅವರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು’ ಎಂದರು.

ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಕುಂದಾಪುರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಚೇರಿ ಆಗುತ್ತಿರುವುದು, ಶಾಸಕರು ಹಾಗೂ ಸಂಗಡಿಗರಿಗೆ ಹೊಟ್ಟೆ ಉರಿಯಾದಂತಿದೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮೀನುಗಾರಿಕಾ ಫೆಡರೇಶನ್ ಮಾಜಿ ಅಧ್ಯಕ್ಷ ಬಿ.ಹಿರಿಯಣ್ಣ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಅಲೆವೂರು, ಜಿಲ್ಲಾ ವಕ್ತಾರ ಕೆ. ವಿಕಾಸ್ ಹೆಗ್ಡೆ, ಪ್ರಮುಖರಾದ ಎಸ್ ರಾಜು ಪೂಜಾರಿ ಬೈಂದೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಮಲ್ಯಾಡಿ ಶಿವರಾಮ ಶೆಟ್ಟಿ, ಮುಸ್ತಾಕ್ ಅಹ್ಮದ್ ಬೆಳ್ವೆ, ದೇವಕಿ ಪಿ ಸಣ್ಣಯ್ಯ, ಕೆದೂರು ಸದಾನಂದ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ ಇದ್ದರು. ಎಚ್. ಹರಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಣಿ ನಾರಾಯಣ ಆಚಾರ್ ವಂದಿಸಿದರು. ಮಂಜುನಾಥ ಹಿಲಿಯಾಣ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-28-899455563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.