ಕುಂದಾಪುರ: ‘ಪ್ರತಿಭಾವಂತರು, ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಏಪ್ರಿಲ್ 2ರಂದು 2025–26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಶಾಸಕ ಎ. ಕಿರಣ್ಕುಮಾರ ಕೊಡ್ಗಿ ತಿಳಿಸಿದರು.

ಕಾಲೇಜಿನಲ್ಲಿ ಉದ್ಯೋಗ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಶನಿವಾರ ಮಾತನಾಡಿದರು.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ನಡೆಯುವ ಈ ಉದ್ಯೋಗ ಮೇಳಕ್ಕೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗವಿದೆ. ಮೇಳದಲ್ಲಿ 50ಕ್ಕೂ ಅಧಿಕ ಕಂಪನಿಗಳು, ಸ್ವ ಉದ್ಯೋಗ ತರಬೇತಿ ಸಂಸ್ಥೆಗಳು ಪಾಲ್ಗೊಳ್ಳಲಿವೆ. ಆಸಕ್ತ ಅಭ್ಯರ್ಥಿಗಳು ಸ್ವವಿವರ, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರದೊಂದಿಗೆ ಮೇಳದಲ್ಲಿ ನೇರವಾಗಿ ಭಾಗವಹಿಸಬಹುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಮಹೇಶ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯ್ ಕುಮಾರ್, ಪ್ರಾಂಶುಪಾಲ ಶುಭಕರಾಚಾರ್ಯ, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-28-1820452084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.