ಕುಂದಾಪುರ: ‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗು ಬ್ರಹ್ಮಶ್ರೀ ನಾರಾಯಣ ಗುರು ಹಿಂದುಳಿದ ವರ್ಗದವರ ದನಿಯಾಗಿದ್ದರು. ಶಿಕ್ಷಣದಿಂದ ಮಾತ್ರ ಎಲ್ಲವನ್ನೂ ಸಾಧಿಸಬಹುದು ಎನ್ನುವ ಸಂದೇಶ ನೀಡಿದವರು’ ಎಂದು ತಾಲ್ಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಮಿತಿ ಆಶ್ರಯದಲ್ಲಿ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಮಿತಿ ಪ್ರಧಾನ ಸಂಚಾಲಕ ಕೆ.ಸಿ. ರಾಜು ಬೆಟ್ಟಿನಮನೆ ಅಧ್ಯಕ್ಷತೆ ವಹಿಸಿದ್ದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಸಿಐಟಿ ಮುಖಂಡ ವಿ. ಚಂದ್ರಶೇಖರ್ ಮಾತನಾಡಿದರು.

ಪ್ರಮುಖರಾದ ಸುರೇಶ್ ಹಕ್ಲಾಡಿ, ಸತೀಶ್ ಕಂಚುಗೋಡು, ನಾರಾಯಣ ಬೀಜಾಡಿ, ಭೋಜರಾಜ ಕೆ. ಭಾಗವಹಿಸಿದ್ದರು. ಚಂದ್ರ ಕೊರ್ಗಿ ಸ್ವಾಗತಿಸಿದರು. ಉದಯ ಕೊಳೂರು ವಂದಿಸಿದರು. ರವಿ ಬನ್ನಾಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-28-730982270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.