ಕುಂದಾಪುರ: ಸರ್ಕಾರಿ ಭೂಮಿ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಬೇಕು. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮುಂದಾಗಿರುವುದು ಖಂಡನೀಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಂದಾಪುರ ಬಿಜೆಪಿ ಮಂಡಲ ಹಾಗೂ ಭಾರತೀಯ ಮಜ್ದೂರ್ ಸಂಘಟನೆಯ ನೇತೃತ್ವದಲ್ಲಿ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸರ್ಕಾರ ಮಂಜೂರು ಗೊಳಿಸಿರುವ ಜಾಗದಲ್ಲಿ ಈ ಹಿಂದೆ ಬಹು ಮಹಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಬೆಲೆಬಾಳುವ ಜಾಗವನ್ನು ರಾಜಕೀಯ ಪಕ್ಷಕ್ಕೆ ಮಂಜೂರುಗೊಳಿಸಿರುವುದು ಸರಿಯಲ್ಲ. ಮಂಜೂರುಗೊಳಿಸಿದ ಜಾಗವನ್ನು ಕೂಡಲೇ ರದ್ದುಗೊಳಿಸಬೇಕು. ಜನಾಭಿಪ್ರಾಯಕ್ಕೆ ವಿರೋಧವಾಗಿ ನಡೆದರೆ ಅದಕ್ಕೆ ಸರ್ಕಾರವೇ ಹೊಣೆ ಎಂದರು.

ಶಾಸಕ ಎ.ಕಿರಣ್ಕುಮಾರ್ ಕೊಡ್ಗಿ ಮಾತನಾಡಿ, ₹5 ಕೋಟಿಯಷ್ಟು ಮೌಲ್ಯದ ಜಾಗವನ್ನು ಕೇವಲ ₹1.75 ಲಕ್ಷಕ್ಕೆ ನೀಡಲಾಗಿದೆ. ಸರ್ಕಾರಿ ಪರಂಬೋಕು ಎಂದು ಇದ್ದರೂ ಯಾವುದೇ ಅಡೆತಡೆ ಇಲ್ಲದೆ ಅಧಿಕಾರಿಗಳು ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಆದರೆ, ಖಾರ್ವಿಕೇರಿ, ಕೋಡಿಯಲ್ಲಿ 40-50 ವರ್ಷಗಳಿಂದ ವಾಸವಿದ್ದವರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ಕೋಡಿಯಲ್ಲಿ 98 ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ. 3 ವರ್ಷದಿಂದ ಹೋರಾಡುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಆದರೆ ಅದೇ ಅಧಿಕಾರಿಗಳು ತರಾತುರಿಯಲ್ಲಿ ಈ ಜಾಗ ಮಂಜೂರು ಮಾಡಿದ್ದಾರೆ. 30-40 ವರ್ಷಗಳಿಂದ ಇಲ್ಲಿ ಗೂಡ್ಸ್ ಆಟೊ ರಿಕ್ಷಾ ನಿಲುಗಡೆ ಇದ್ದರೂ, ಅವರ ನೋವುಗಳನ್ನು ಕೇಳುವವರೇ ಇಲ್ಲ. ಈ ಆದೇಶವನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟದ ಮೂಲಕವಾದರೂ ತಾರ್ಕಿಕ ಅಂತ್ಯಕ್ಕೆ ಪ್ರಯತ್ನಿಸಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಬಡವರಿಗೆ ಕೇವಲ 3 ಸೆಂಟ್ಸ್ ಜಾಗದ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಆಗುವುದಿಲ್ಲ. ಆದರೆ ರಾಜಕೀಯ ಪಕ್ಷದ ಕಚೇರಿಗೆ ಸರ್ಕಾರಿ ಜಾಗ ಸಿಗುತ್ತದೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಹೋರಾಟ ಮುಂದುವರೆಸುವುದಾಗಿ ಹೇಳಿದರು.

ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಪ್ರಮುಖರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಐರೋಡಿ ವಿಠಲ ಪೂಜಾರಿ, ಶ್ರೀಕಾಂತ್ ನಾಯಕ್, ಮೋಹನ್ ದಾಸ್ ಶೆಣೈ, ಭಾಸ್ಕರ ಬಿಲ್ಲವ ಹೇರಿಕುದ್ರು, ಮಂಜು ಬಿಲ್ಲವ ಕೋಟೇಶ್ವರ, ಗಿರೀಶ್ ಜಿ.ಕೆ, ಪ್ರಮೋದ್ ಹಂದೆ, ಅವಿನಾಶ್ ಉಳ್ತೂರು, ಸತೀಶ್ ಶೆಟ್ಟಿ ಕಿದಿಯೂರು, ವಿ.ಪ್ರಭಾಕರ, ರತ್ನಾಕರ್ ಚರ್ಚ್ ರಸ್ತೆ, ಗಿರೀಶ್ ಕುಂದಾಪುರ, ಶೇಖರ ಪೂಜಾರಿ ಇದ್ದರು.

ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಸ್ವಾಗತಿಸಿದರು. ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್ ನಿರೂಪಿಸಿದರು. ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-28-2017766662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.