ಕುಂದಾಪುರ: ‘ಗ್ರಾಮ ಪಂಚಾಯಿತಿ ಚುನಾವಣೆ ನಡೆಯದೇ ಇರುವುದರಿಂದ ಈ ವರ್ಷದ ಹದಿನೈದನೇ ಹಣಕಾಸು ಬಿಡುಗಡೆಯಾಗದೇ ಹಲವು ಕಾಮಗಾರಿಗಳ ಬಿಲ್ಲುಗಳು ಗುತ್ತಿಗೆದಾರರಿಗೆ ಪಾವತಿಯಾಗಿಲ್ಲ’ ಎಂದು ಕೆಡಿಪಿ ಸದಸ್ಯ ರಮೇಶ ಶೆಟ್ಟಿ ವಕ್ವಾಡಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ಆಧಿಕಾರಿಗಳ ನೇಮಕ ಆಗಿದೆ. ಮಳೆಗಾಲ ಎದುರಿಸಲು ಹೆಚ್ಚಿನ ಗ್ರಾಮ ಪಂಚಾಯಿತಿಗಳು ಪೂರ್ವಸಿದ್ಧತೆ ಮಾಡಿಕೊಂಡಿಲ್ಲ. ಯೋಜನೆ ರೂಪಿಸಲು ಹಣಕಾಸಿನ ತೊಂದರೆ ಕಾಡುತ್ತಿದೆ. ಯಾವ ಕೆಲಸವೂ ನಿರೀಕ್ಷೆಯಂತೆ ಆಗುತ್ತಿಲ್ಲ. ಕ್ಷೇತ್ರದ ಶಾಸಕರು ಅಧಿಕಾರಿಗಳ ಸಭೆ ಕರೆದು ಸ್ವಷ್ಟ ಸೂಚನೆಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಧಿಕಾರಿಗಳು ಜನರ ಸಮಸ್ಯೆಗಳ ಬಗ್ಗೆ ಗಮನ ಕೊಡಬೇಕು. ಮಳೆಗಾಲದ ಅನಾಹುತ ಹಾಗೂ ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಸರ್ಕಾರಕ್ಕೆ ಹಣಕಾಸಿನ ನೆರವು ಮತ್ತು ಅದರ ಅನುಷ್ಠಾನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-193870561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.