ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಬಸ್‌ಗಾಗಿ ಆಗ್ರಹಿಸಿ ಪ್ರತಿಭಟನೆ

Published 27 ಜೂನ್ 2024, 5:02 IST
Last Updated 27 ಜೂನ್ 2024, 5:02 IST
ಅಕ್ಷರ ಗಾತ್ರ

ಕುಂದಾಪುರ: ಹಕ್ಲಾಡಿ ಗ್ರಾಮದ ಸುತ್ತಮುತ್ತಲ ಹಳ್ಳಿಗಳಿಗೆ ಸರ್ಕಾರಿ ಬಸ್ ಓಡಿಸಬೇಕೆಂದು ಆಗ್ರಹಿಸಿ ಹಕ್ಲಾಡಿ ಗ್ರಾಮಸ್ಥರು ಸೋಮವಾರ ಹಕ್ಲಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಕ್ಲಾಡಿ ಗ್ರಾಮದ ಸುತ್ತಮುತ್ತಲ ದೇವಲ್ಕುಂದ, ಬಗ್ವಾಡಿ, ನೂಜಾಡಿ, ಬ್ರಹ್ಮೇರಿ, ಹಳ್ಳಿಜೆಡ್ಡು, ಹೊರ್ನಿ, ಕಟ್ಟಿನಮಕ್ಕಿ, ಮಾಣಿಕೊಳಲು, ಕುಂದಬಾರಂದಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರ್ಕಾರಿ ಬಸ್ಸು ಓಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ನಾಡ ಗ್ರಾಮ ಪಂಚಾಯಿತಿ ಸದಸ್ಯ ರಾಜೀವ ಪಡುಕೋಣೆ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕೋಣಿ, ತಾಲ್ಲೂಕು ಕಾರ್ಯದರ್ಶಿ ನಾಗರತ್ನ ನಾಡ ಅವರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಕುಂದಾಪುರ ತಾಲ್ಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ (ಸಿಡಬ್ಲ್ಯುಎಫ್ಐ-ಸಿಐಟಿಯು) ಪ್ರಧಾನ ಕಾರ್ಯದರ್ಶಿ ಸಂತೋಷ್ ಹೆಮ್ಮಾಡಿ, ನಾಡ ಗ್ರಾಮ ಪಂಚಾಯಿತಿ ಸದಸ್ಯೆ ಶೋಭಾ ಕೆರೆಮನೆ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಬೈಂದೂರು ಅಧ್ಯಕ್ಷೆ ಮನೋರಮ ಭಂಡಾರಿ, ಕುಂದಬಾರಂದಾಡಿ ಕಟ್ಟಡ ಕಾರ್ಮಿಕರ ಅಧ್ಯಕ್ಷ ಮಹಾದೇವ ಆಚಾರ್, ಕಾರ್ಯದರ್ಶಿ ಮಂಜುನಾಥ್ ಇದ್ದರು.

ಹಕ್ಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ದೇವಾಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಸತೀಶ್ ಅವರ ಮೂಲಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ‌ ಮನವಿ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT