ಕುಂದಾಪುರ: ಸ್ಥಳೀಯ ಗ್ರಾಮ ಪಂಚಾಯಿತಿಯ ಎಸ್ಎಲ್ಆರ್ಎಂ ಘಟಕ, ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ, ತೆಕ್ಕಟ್ಟೆ ಫ್ರೆಂಡ್ಸ್ ಹಾಗೂ ಜೈ ಭಾರತ್ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಯಿತು.

ಅಭಿಯಾನಕ್ಕೆ ಚಾಲನೆ ನೀಡಿದ ತೆಕ್ಕಟ್ಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್, ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಇರಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸುವುದು ಸೇರಿದಂತೆ ಸ್ವಚ್ಛ ಗ್ರಾಮ ಪರಿಕಲ್ಪನೆಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಪ್ರಮುಖರಾದ ಶೋಭಾ ಶೆಟ್ಟಿ, ವಿಜಯ ಭಂಡಾರಿ, ನಿವೃತ್ತ ಯೋಧ ರವಿ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ತೆಕ್ಕಟ್ಟೆ ಫ್ರೆಂಡ್ಸ್ ಮುಖ್ಯಸ್ಥ ಪ್ರಕಾಶ್ ಶೆಟ್ಟಿ, ಪಂಚಾಯಿತಿ ಎಸ್ಎಲ್ಆರ್ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ, ಜೈ ಭಾರತ್ ಸಂಘಟನೆಯ ಸಂತೋಷ್ ಪೂಜಾರಿ, ತಾಲ್ಲೂಕು ಪಂಚಾಯಿತಿಯ ಉಮೇಶ್ ಪೂಜಾರಿ, ಸಂದೀಪ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-1293788929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.