ಕುಂದಾಪುರ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿವಿಧ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಯಿತು.

ಬಾಲಕಿಯರ ನಿಲಯ ಕುಂದಾಪುರ, ಹಂಗಳೂರು, ಬೈಂದೂರು, ಕೆದೂರು ನಿಲಯಗಳ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಪ್ರಭಾಕರ್ ವಿ. ಉದ್ಘಾಟಿಸಿ, ಹಾಸ್ಟೆಲ್ಗಳ ಪರಿಸರ, ಕೈ ತೋಟ ರಚನೆ ಉತ್ತಮವಾಗಿದೆ. ಮಕ್ಕಳ ಆಸಕ್ತಿ, ವಾರ್ಡನ್ಗಳ ಮಾರ್ಗದರ್ಶನ ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಆಶಾದೇವಿ ನಾಯಕ್, ಹೇರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಕಮಲಾ ಮಾತನಾಡಿದರು. ವಿದ್ಯಾರ್ಥಿನಿ ನಿಸರ್ಗ ಸ್ವಾಗತಿಸಿದರು. ವಿದ್ಯಾರ್ಥಿನಿಯ ಅನುಷಾ ನಿರೂಪಿಸಿದರು. ರಕ್ಷಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-707113012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.