ಕುಂದಾಪುರ: ಅಭಿವೃದ್ಧಿ ಕುರಿತಾದ ಚರ್ಚೆ ನಡೆಯಬೇಕಾದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಶಿಷ್ಟಾಚಾರದ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಮುಖಂಡ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೂರು ತಿಂಗಳಿಗೊಮ್ಮೆ ನಡೆಯುವ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಯಲ್ಲಿ ಇಲಾಖಾವಾರು ಚರ್ಚೆ ಮಾಡಲು ಸಾಕಷ್ಟು ವಿಚಾರಗಳಿರುತ್ತವೆ. ಈ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆ ಹಾಗೂ ಪ್ರಗತಿಯ ಬಗ್ಗೆ ಚರ್ಚೆ, ಸಮಾಲೋಚನೆ, ಪರಿಶೀಲನೆ, ಸಲಹೆ ಹಾಗೂ ತೀರ್ಮಾನಗಳು ನಡೆಯಬೇಕು ಎನ್ನುವ ನಿರ್ದಿಷ್ಟ ಕಾರ್ಯಸೂಚಿಗಳಿರುತ್ತದೆ. ಅಮೂಲ್ಯವಾದ ಈ ಸಭೆಯಲ್ಲಿ ಕೇವಲ ಅಭಿವೃದ್ಧಿ ಹಾಗೂ ಜನಪರ ವಿಚಾರಗಳ ಕುರಿತು ಮಾತ್ರ ಚರ್ಚೆಗಳು ನಡೆಯಬೇಕು ಎಂದು ಹೇಳಿದ್ದಾರೆ.

ಜನಪ್ರತಿನಿಧಿಗಳು ಶಿಷ್ಟಾಚಾರ ಅಪೇಕ್ಷೆ ಮಾಡುವುದು ಹಾಗೂ ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡದೇ ಇದ್ದಾಗ ಆಕ್ಷೇಪ ದಾಖಲಿಸುವುದು ತಪ್ಪಲ್ಲ. ಆದರೆ ಇದಕ್ಕಾಗಿ ನಿರ್ದಿಷ್ಟ ಕಾರ್ಯಸೂಚಿಯಂತೆ ನಡೆಯಬೇಕಾದ ಈ ಸಭೆಗಳನ್ನು ಬಳಕೆ ಮಾಡಿಕೊಳ್ಳುವುದು ಮಾತ್ರ ಸರಿಯಲ್ಲ. ಜನಪ್ರತಿನಿಧಿಗಳ ಗೌರವಕ್ಕೆ ಚ್ಯುತಿಯಾದಾಗ ಜಿಲ್ಲಾಧಿಕಾರಿಗಳೊಂದಿಗೆ ಕೂತು ಮಾತನಾಡಿ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಕೆಡಿಪಿಯಂತಹ ಜನಪರ ಹಾಗೂ ಅಭಿವೃದ್ಧಿ ಪರ ಚರ್ಚೆ ನಡೆಯಬೇಕಾದ ಸಭೆಗಳು, ಈ ರೀತಿಯ ಅನಗತ್ಯ ಚರ್ಚೆಗಳಿಗೆ ವೇದಿಕೆಯಾಗಬಾರದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-1336732735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.