ಕುಂದಾಪುರ: ‘ಕಾರ್ಮಿಕ ನಿಯಮಾವಳಿಗಳನ್ನು ಮೀರಿ ಹೆಚ್ಚಿನ ಅವಧಿಯ ಕೆಲಸವನ್ನು ಮಾಡಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ಹುನ್ನಾರ ಹೆಚ್ಚಾಗುತ್ತಿದೆ’ ಎಂದು ಸುರತ್ಕಲ್ ಎನ್ಐಟಿಕೆ ನಿವೃತ್ತ ಉಪನ್ಯಾಸಕ ರಾಜೇಂದ್ರ ಉಡುಪ ಹೇಳಿದರು.

ಸಿಐಟಿಯು ಕುಂದಾಪುರ ಸಂಚಲನ ಸಮಿತಿ ನೇತೃತ್ವದಲ್ಲಿ ಇಲ್ಲಿನ ಶಾಸ್ತ್ರೀ ಸರ್ಕಲ್ ಬಳಿ ಶುಕ್ರವಾರ ಕಾರ್ಮಿಕ ದಿನಾಚರಣೆ ಅಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕೈಗಾರಿಕಾ ಅಭಿವೃದ್ಧಿ, ಹೂಡಿಕೆ ಆಕರ್ಷಣೆ ಹೆಸರಿನಲ್ಲಿ ಜಾರಿಯಾಗುತ್ತಿರುವ ಸರ್ಕಾರಗಳ ಆರ್ಥಿಕ ನೀತಿಗಳು ಬಂಡವಾಳ ಶಾಹಿಗಳ ಪರ ಜಾರಿಯಾಗುತ್ತಿವೆ ಎಂಬ ಆರೋಪಗಳು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿವೆ. ಸರ್ಕಾರಗಳ ಈ ಕ್ರಮಗಳು ದೊಡ್ಡ ಕಂಪನಿಗಳಿಗೆ ಹೆಚ್ಚಿನ ಲಾಭ ತರುತ್ತಿವೆ. ಸಾರ್ವಜನಿಕ ಸಂಪನ್ಮೂಲಗಳನ್ನು ಖಾಸಗಿ ಸಂಸ್ಥೆಗಳ ಕೈಗೆ ಒಪ್ಪಿಸುವ ಕ್ರಮಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದುದು. ಸರ್ಕಾರಗಳಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ಲಾಭ ಗಳಿಸಿರುವ ಖಾಸಗಿ ಕಂಪನಿಗಳು ಸರ್ಕಾರಗಳನ್ನು ತಮ್ಮ ಕಪಿಮುಷ್ಟಿಯಲ್ಲಿರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ತರಲು ಪ್ರಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಹೆಂಚು ಕಾರ್ಮಿಕ ಸಂಘದ ಅಧ್ಯಕ್ಷ ವಿ. ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ಸಂಘಟನೆ ಜಿಲ್ಲಾ ಹೆಂಚು ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ನರಸಿಂಹ, ತಾಲ್ಲೂಕು ಕಟ್ಟಡ ನಿರ್ಮಾಣ ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ, ತಾಲ್ಲೂಕು ಬೀಡಿ ವರ್ಕರ್ಸ್ ಯೂನಿಯನ್ ಪ್ರಮುಖರಾದ ಮಹಾಬಲ ವಡೇರಹೋಬಳಿ, ಬಲ್ಕೀಸ್, ತಾಲ್ಲೂಕು ಆಟೊರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ರಮೇಶ ವಿ, ಕಾರ್ಮಿಕ ಸಂಘಟನೆಯ ಮುಖಂಡೆ ಸುಶೀಲ ನಾಡ ಭಾಗವಹಿಸಿದ್ದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ. ಸ್ವಾಗತಿಸಿದರು. ಸಿಐಟಿಯು ಸಂಘಟನೆಯ ತಾಲ್ಲೂಕು ಆಟೊರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.