ಕುಂದಾಪುರ: ತಾಲ್ಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದಲ್ಲಿ ಸರ್ಕಾರಿ ಜಮೀನು ಕಬಳಿಸುವುದರಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದಲಿತ ಪರ ಹೋರಾಟಗಾರ್ತಿ ನಾಗರತ್ನ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಮುಂದೆ ಬುಧವಾರ ‘ಒಲೆ ಹೂಡಿ ಅನ್ನ ಬೇಯಿಸುವ’ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಗೊಂಡಿತು.

ಕಂದಾಯ ಸಚಿವರಿಗೆ ಉಪವಿಭಾಗಾಧಿಕಾರಿ ಮೂಲಕ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು ಸರ್ಕಾರಿ ಜಮೀನು ಒತ್ತುವರಿಗೆ ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ನೆರವು ನೀಡಿದ್ದಾರೆ. ಕುಂದಾಪುರ ತಹಶೀಲ್ದಾರ್ ಕರ್ತವ್ಯ ಲೋಪ ಎಸಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅಕ್ರಮ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಉಡುಪಿ ಸಾಮಾಜಿಕ ಕಾರ್ಯಕರ್ತೆ ವಿನುತಾ ಕಿರಣ್ ಮತ್ತು ಸಂಗಡಿಗರು, ಕೆಆರ್ಎಸ್ ಉಪಾಧ್ಯಕ್ಷೆ ಮುಕಾಂಬಿಕ ಮೊಗವೀರ, ತಿಲೋತ್ತಮ್ ಟೀಚರ್, ದಲಿತ ಸಂಘರ್ಷ ಸಮಿತಿ ರಘು ಶಿರೂರು, ರಘು ಹೆರಂಜಾಲು, ಶಶಿ ಬಲ್ಕೂರು, ಅನಿಲ್ ಮದ್ದುಗುಡ್ಡೆ, ಇಕ್ಬಾಲ್ ಕುಂಜಿಬೆಟ್ಟು, ಮಂಜುನಾಥ್ ತೆಕಟ್ಟೆ, ಹರೀಶ್ ತೆಕಟ್ಟೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಧರಣಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-10903017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.