ಮಂಗಳವಾರ, ಮಾರ್ಚ್ 21, 2023
21 °C

ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಾಪುರ: ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಬುಧವಾರ ತಾಲ್ಲೂಕು ಬಾರ್ ಅಸೋಸೀಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನೇತೃತ್ವದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.

ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು, ಪ್ರತಿಬಂಧಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ದೂರಿನ ಆಧಾರದಲ್ಲಿ ಯುವ ವಕೀಲರ ಮೇಲೆ ಪ್ರಕರಣ ದಾಖಲಿಸಿ ರಾತೋರಾತ್ರಿ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ದೌರ್ಜನ್ಯವನ್ನು ಸಭೆಯಲ್ಲಿ ಖಂಡಿಸಿದ್ದಲ್ಲದೆ, ತಪ್ಪಿತಸ್ಥ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ಉಪಾಧ್ಯಕ್ಷೆ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು