ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಂದಾಪುರ: ಪತ್ನಿಗೆ ಕತ್ತಿಯಿಂದ ಕಡಿದು ಸಂಭ್ರಮಿಸಿದ ಪತಿ

Published : 6 ಆಗಸ್ಟ್ 2024, 7:40 IST
Last Updated : 6 ಆಗಸ್ಟ್ 2024, 7:40 IST
ಫಾಲೋ ಮಾಡಿ
Comments

ಕುಂದಾಪುರ: ಪತ್ನಿಯ ಕುತ್ತಿಗೆಗೆ ಹಲ್ಲೆ ನಡೆಸಿದ ಪತಿ, ಮನೆ ಬಾಗಿಲಿಗೆ ಚಿಲಕ‌ ಹಾಕಿ ಸಂಭ್ರಮಿಸಿದ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ರೂರಿನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಸೊರಬ ತಾಲ್ಲೂಕಿನ ಅನಿತಾ (38) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಲಕ್ಷ್ಮಣ (40) ಎಂಬಾತನನ್ನು ಬಂಧಿಸಲಾಗಿದೆ.

ಘಟನೆ ವಿವರ: ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ರೂರಿನ ವೃದ್ಧಾಶ್ರಮವೊಂದರ ತೋಟದ ಕೆಲಸಕ್ಕೆಂದು ಬಂದಿದ್ದ ದಂಪತಿ, ಅಲ್ಲಿನ ಕಾರ್ಮಿಕರ ಕ್ವಾರ್ಟರ್ಸ್‌ನಲ್ಲಿ ವಾಸ್ತವ್ಯ ಇದ್ದರು. ಶನಿವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕಾಗಿ ಪತಿ–ಪತ್ನಿಯ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿದ್ದರಿಂದ, ಲಕ್ಷ್ಮಣ ಹರಿತವಾದ ಕತ್ತಿಯಿಂದ ಅನಿತಾ ಅವರ ಕುತ್ತಿಗೆ ಕಡಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಅನಿತಾ ಮನೆಯ ಅಡುಗೆ ಕೋಣೆಯಲ್ಲಿ ಬಿದ್ದಿದ್ದರು. ಲಕ್ಷ್ಮಣ ಮನೆಯ ಬಾಗಿಲ ಚಿಲಕ ಹಾಕಿ ಮನೆಯ ಹಾಲ್‌ನಲ್ಲಿ ಕತ್ತಿ ಹಿಡಿದು ಕುಣಿಯುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡಿದ್ದ ಅನಿತಾ ಅವರ ರಕ್ಷಣೆಗೆ ಪರದಾಡಿದರು. ಮನೆ ಬಾಗಿಲು ತೆರೆಯದೆ, ಕೈಯಲ್ಲಿ ಕತ್ತಿ ಹಿಡಿದು, ಅವೇಶ ಬಂದವನಂತೆ ಕುಣಿಯುತ್ತಿದ್ದ ಆರೋಪಿಯನ್ನು ಸಮಾಧಾನ ಪಡಿಸಲು ಮುಂದಾದರು. ಅಗ್ನಿಶಾಮಕ ಸಿಬ್ಬಂದಿ ಸಹಕಾರದಿಂದ ಮನೆಯೊಳಗೆ ಅಶ್ರುವಾಯು ಪ್ರಯೋಗಿಸಿದರೂ ಪ್ರಯೋಜನವಾಗಲಿಲ್ಲ. ಸುಮಾರು ಒಂದೂವರೆ ಗಂಟೆ ಪ್ರಯತ್ನ ಮಾಡಿದರು. ಬಳಿಕ ಆರೋಪಿಯ ಗಮನ ಬೇರೆಡೆ ಸೆಳೆದ ರಕ್ಷಣಾ ತಂಡ, ಸ್ಥಳೀಯರ ಸಹಕಾರದಿಂದ ಮನೆಯ ಹಿಂದಿನ ಕಿಟಕಿ ಒಡೆದು ಅಡುಗೆ ಕೋಣೆಗೆ ನುಗ್ಗಿ ಗಂಭೀರ ಸ್ಥಿತಿಯಲ್ಲಿದ್ದ ಅನಿತಾ ಅವರನ್ನು ಹೊರತಂದು ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಥಳೀಯರ ರಕ್ಷಣಾ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT