ಕುಂದಾಪುರ: ನಮ್ಮ ನಾಡ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಡಾ. ರಿಜ್ವಾನ್ ಅಹ್ಮದ್ ಅವರು ಇಲ್ಲಿನ ಕಮ್ಯುನಿಟಿ ಸೆಂಟರ್ಗೆ ಭೇಟಿ ನೀಡಿದರು.

ಸಂಘಟನೆ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಇಲ್ಲಿನ ಕಚೇರಿಗೆ ಪ್ರಥಮ ಭೇಟಿ ನೀಡಿದ ಅವರನ್ನು ಸನ್ಮಾನಿಸಲಾಯಿತು.

ಕಮ್ಯುನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹುಸೇನ್ ಹೈಕಾಡಿ ಅವರು ಸೆಂಟರ್ ವತಿಯಿಂದ ನಡೆಯುತ್ತಿರುವ ವಿವಿಧ ಸಾಮಾಜಿಕ, ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ರಿಜ್ವಾನ್ ಅಹ್ಮದ್ ಅವರು ಸೆಂಟರ್ನ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ಖಜಾಂಚಿ ಪೀರ್ ಸಾಹೇಬ್, ಜಿಲ್ಲಾ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿಹಾರ್ ಅಹ್ಮದ್, ಸದಸ್ಯರಾದ ಅಕ್ರಮ್ ಉಡುಪಿ, ಮನ್ಸೂರ್ ಮರವಂತೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-111129971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.